ADVERTISEMENT

‘ಬೇಸಿಗೆಯಲ್ಲಿ ನೀರಿಗೆ ಸಮಸ್ಯೆ ಬರದಿರಲಿ’

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2021, 12:55 IST
Last Updated 19 ಏಪ್ರಿಲ್ 2021, 12:55 IST
ಹೊಸಪೇಟೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ತಹಶೀಲ್ದಾರ್‌ ಎಚ್. ವಿಶ್ವನಾಥ್‌ ಮಾತನಾಡಿದರು
ಹೊಸಪೇಟೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ತಹಶೀಲ್ದಾರ್‌ ಎಚ್. ವಿಶ್ವನಾಥ್‌ ಮಾತನಾಡಿದರು   

ಹೊಸಪೇಟೆ(ವಿಜಯನಗರ): ‘ಬೇಸಿಗೆ ಮುಗಿಯುವವರೆಗೆ ಗ್ರಾಮೀಣ ಭಾಗಗಳಲ್ಲಿ ಅಗತ್ಯ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು’ ಎಂದು ತಹಶೀಲ್ದಾರ್ ಎಚ್.ವಿಶ್ವನಾಥ್ ಸೂಚಿಸಿದರು.

ನಗರದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ನಡೆದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಾತನಾಡಿದರು.

ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಳಪಡುವ ಗ್ರಾಮಗಳಲ್ಲಿ ಮೂರು ತಿಂಗಳವರೆಗೆ ಕೈಗೊಂಡ ಕುಡಿಯುವ ನೀರಿನ ವ್ಯವಸ್ಥೆಯ ಕುರಿತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ‘ಅಗತ್ಯ ನೀರಿನ ವ್ಯವಸ್ಥೆ ಕೈಗೊಳ್ಳಬೇಕು. ಎಲ್ಲೂ ನೀರಿಗೆ ಹಾಹಾಕಾರ ಉಂಟಾಗಬಾರದು’ ಎಂದು ತಿಳಿಸಿದರು.

ADVERTISEMENT

‘ಅಪೂರ್ಣ ಕುಡಿಯುವ ನೀರಿನ ಪೈಪ್ಲೈನ್‌ ಅಳವಡಿಕೆ ಸೇರಿದಂತೆ ಇತರೆ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಬೇಕು. ಐತಿಹಾಸಿಕ ಬಾವಿಗಳ ಅಭಿವೃದ್ಧಿಗೆ ಕ್ರಮ ಜರುಗಿಸಬೇಕು’ ಎಂದು ಸೂಚಿಸಿದರು.

ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ್, ಗ್ರಾಮ ನೀರಾವರಿ ಸಮಿತಿ ಎಂಜಿನಿಯರ್ ಪಂಪಾಪತಿ, ಕಂದಾಯ ಇಲಾಖೆಯ ಇನ್‌ಸ್ಪೆಕ್ಟರ್‌ ಮಲ್ಲಿಕಾರ್ಜುನ ಗೌಡ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ಇಲಾಖೆಯ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.