
ಹೊಸಪೇಟೆಯ ಎಸ್ಪಿ ಕಚೇರಿ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಎಎಸ್ಪಿ ಅವರಿಗೆ ಮನವಿ ಸಲ್ಲಿಸಿದರು
ಹೊಸಪೇಟೆ (ವಿಜಯನಗರ): ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ಕೈದಿಗಳಿಗೆ ರಾಜಾತಿಥ್ಯ ನೀಡುವ ಮೂಲಕ ರಾಜ್ಯ ಸರ್ಕಾರ ಅಪರಾಧಿಗಳನ್ನು ಪೋಷಿಸುವ ಕೆಲಸ ಮಾಡುತ್ತಿದೆ. ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಮಂಗಳವಾರ ಎಸ್ಪಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.
ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಕಿಚಿಡಿ ಕೊಟ್ರೇಶ್ ಮಾತನಾಡಿ, ‘ಅಪರಾಧಿಕ ಮನಸ್ಸಿನಿಂದ ಹೊರಬರಲು ಶಿಕ್ಷೆಗೆ ಒಳಗಾದ ಕೈದಿಗಳಿಗೆ ಜೈಲುಗಳಲ್ಲೇ ರಾಜಾಶ್ರಯ ನೀಡುವ ಮೂಲಕ ರಾಜ್ಯ ಸರ್ಕಾರ ಭಯೋತ್ಪಾದಕರು, ಅಪರಾಧಿಗಳಿಗೆ ನೆರವಾಗುತ್ತಿದೆ. ಅಪರಾಧಿಗಳಿಗೆ ನೆರವಾಗಲು ಪೊಲೀಸರಿಗೆ ಅಧಿಕೃತವಾಗಿ ತಿಳಿಸಲಾಗಿದೆಯೇ ಅಥವಾ ಗೃಹ ಸಚಿವರು ನಿದ್ದೆ ಮಾಡುತ್ತಿದ್ದಾರೆಯೇ? ಮುಖ್ಯಮಂತ್ರಿ, ಗೃಹ ಸಚಿವರಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ’ ಎಂದರು.
ಎಎಸ್ಪಿ ಜಿ.ಮಂಜುನಾಥ ಅವರಿಗೆ ಮನವಿ ಸಲ್ಲಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.