ADVERTISEMENT

ಶ್ರೀಶೈಲದಲ್ಲಿ ಕನ್ನಡಿಗರ ಮೇಲಿನ ಹಲ್ಲೆಗೆ ಖಂಡನೆ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2022, 12:51 IST
Last Updated 1 ಏಪ್ರಿಲ್ 2022, 12:51 IST
ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಶುಕ್ರವಾರ ಹೊಸಪೇಟೆ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ, ಶಿರಸ್ತೇದಾರ್‌ ಶ್ರೀಧರ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು
ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಶುಕ್ರವಾರ ಹೊಸಪೇಟೆ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ, ಶಿರಸ್ತೇದಾರ್‌ ಶ್ರೀಧರ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಹೊಸಪೇಟೆ (ವಿಜಯನಗರ): ಆಂಧ್ರ ಪ್ರದೇಶದ ಶ್ರೀಶೈಲದಲ್ಲಿ ಕನ್ನಡಿಗರ ಮೇಲೆ ಅಲ್ಲಿನ ವ್ಯಾಪಾರಿಗಳು ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ತಹಶೀಲ್ದಾರ್ ಕಚೇರಿ ಎದುರು ಸೇರಿದ ಕಾರ್ಯಕರ್ತರು ಆಂಧ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಶಿರಸ್ತೇದಾರ್ ಶ್ರೀಧರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಕರ್ನಾಟಕ ಯಾತ್ರಾರ್ಥಿಗಳು ಅಗತ್ಯ ವಸ್ತುಗಳಿಗೆ ದುಪ್ಪಟ್ಟು ಬೆಲೆ ವಿಧಿಸಿದ್ದನ್ನು ಪ್ರಶ್ನಿಸಿದ್ದರು. ಅದಕ್ಕೆ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವುದು ಎಷ್ಟರಮಟ್ಟಿಗೆ ಸರಿ. ಹಲ್ಲೆ ನಡೆಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ರಾಜ್ಯದ ಭಕ್ತರಿಗೆ ಸೂಕ್ತ ರಕ್ಷಣೆ ಒದಗಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಂಧ್ರ ಸಿ.ಎಂ. ಜೊತೆ ಮಾತನಾಡಬೇಕು ಎಂದು ಒತ್ತಾಯಿಸಿದರು.

ADVERTISEMENT

ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ, ಎಸ್.ಎಂ.ಜಾಫರ್, ಎನ್.ಎಚ್.ಶ್ರೀನಿವಾಸ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.