ADVERTISEMENT

ವಿಜಯನಗರ: ಸಕಾಲಕ್ಕೆ ಫಾರಂ 3 ವಿತರಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2022, 13:43 IST
Last Updated 21 ಫೆಬ್ರುವರಿ 2022, 13:43 IST
ವಿಜಯನಗರ ರಕ್ಷಣಾ ವೇದಿಕೆ ಕಾರ್ಯಕರ್ತರು ಸೋಮವಾರ ಹೊಸಪೇಟೆ ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿ, ಅಧ್ಯಕ್ಷೆ ಸುಂಕಮ್ಮ ಅವರಿಗೆ ಮನವಿ ಸಲ್ಲಿಸಿದರು
ವಿಜಯನಗರ ರಕ್ಷಣಾ ವೇದಿಕೆ ಕಾರ್ಯಕರ್ತರು ಸೋಮವಾರ ಹೊಸಪೇಟೆ ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿ, ಅಧ್ಯಕ್ಷೆ ಸುಂಕಮ್ಮ ಅವರಿಗೆ ಮನವಿ ಸಲ್ಲಿಸಿದರು   

ಹೊಸಪೇಟೆ (ವಿಜಯನಗರ): ನಗರಸಭೆಯಿಂದ ಫಾರಂ ನಂಬರ್ 3 ಪಡೆದುಕೊಳ್ಳಲು ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಸಕಾಲದಲ್ಲಿ ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿಜಯನಗರ ರಕ್ಷಣಾ ವೇದಿಕೆ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಬಳಿಕ ನಗರಸಭೆ ಅಧ್ಯಕ್ಷೆ ಸುಂಕಮ್ಮ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಫಾರಂ 3 ಪಡೆಯಲು ಬೇಕಾದ ಮಾಹಿತಿಯನ್ನು ಫಲಕದಲ್ಲಿ ಅಳವಡಿಸಬೇಕು. ಟೋಕನ್‌ ವ್ಯವಸ್ಥೆ ಜಾರಿಗೆ ತರಬೇಕೆಂದು ಒತ್ತಾಯಿಸಿದರು.

ನಗರದಲ್ಲಿ ಬೀದಿ ನಾಯಿಗಳು, ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದೆ. ಕಸ ವಿಲೇವಾರಿ ಸಮರ್ಪಕವಾಗಿ ಆಗುತ್ತಿಲ್ಲ. ನಾಗರಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಆಗ್ರಹಿಸಿದರು.

ADVERTISEMENT

ವೇದಿಕೆಯ ಕಟಿಗಿ ಜಂಬಯ್ಯ ನಾಯಕ, ಕೆ.ರಾಮಪ್ಪ, ನಾಗರಾಜ್, ಚಂದ್ರಹಾಸ, ಮಹಾಲಕ್ಷ್ಮಿ, ಗೋಪಿನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.