
ಹೊಸಪೇಟೆ: ಒಳ ಮೀಸಲಾತಿ ಜಾರಿ ಆಗ್ರಹಿಸಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿಯಿಂದ ಸೋಮವಾರ ಇಲ್ಲಿ ಪ್ರತಿಭಟನೆ ನಡೆಯಿತು.
ರಾಜ್ಯದಲ್ಲಿ ಸಂಪೂರ್ಣ ಒಳಮೀಸಲಾತಿ ಜಾರಿ ಆಗಬೇಕು, ಸರ್ಕಾರ ಒಳ ಮೀಸಲಾತಿ ಜಾರಿ ಮಾಡಿ ಆರು ತಿಂಗಳಾದರೂ ಇನ್ನೂ ಸಂಪೂರ್ಣವಾಗಿ ಜಾರಿಯಾಗಿಲ್ಲ, ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ ಅವರು ಸ್ವಜಾತಿಗೆ ಸೀಮಿತವಾಗಿ ಒಳ ಮೀಸಲಾತಿಯನ್ನೇ ಎಳ್ಳುನೀರು ಬಿಟ್ಟು ಹಳ್ಳ ಹಿಡಿಸಲು ಹುನ್ನಾರ ನಡೆಸಿದ್ದಾರೆ ಎಂದು ಸಮತಿಯ ರಾಜ್ಯ ಸಂಚಾಲಕ ಕರಿಯಪ್ಪ ಗುಡಿಮನಿ ಆರೋಪಿಸಿದರು.
ಮಾರ್ಚ್ 6ಕ್ಕೆ ಮೊದಲು ಒಳ ಮೀಸಲಾತಿ ಜಾರಿ ಮಾಡಬೇಕು. ಅಲೆಮಾರಿ ಸಮುದಾಯಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲೇಬೇಕು ಎಂದು ಅವರು ಒತ್ತಾಯಿಸಿದರು.
ನಗರಸಭೆ ಮಾಜಿ ಸದಸ್ಯ ಗೋವಿಂದರಾಜ್ , ವಿವಿಧ ಸಂಘಟನೆ ಮುಖಂಡರಾದ ವೀರು ಸ್ವಾಮಿ, ಬಸವರಾಜ, ಮಾರೇಶ್, ಶೇಷು, ಈ. ಧನಂಜಯ್, ಓಬಳೇಶ್, ರಾಮಲಿ, ಜಗನ್ನಾಥ, ಜೈರಾಮ, ಸುಮಲತಾ ಇತರರು ಇದ್ದರು. ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಕಳುಹಿಸಿಕೊಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.