ADVERTISEMENT

ಹೊಸಪೇಟೆ: ಹಿಜಾಬ್‌ ಧರಿಸಲು ಅವಕಾಶಕ್ಕೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2022, 11:40 IST
Last Updated 7 ಫೆಬ್ರುವರಿ 2022, 11:40 IST
ಹೊಸಪೇಟೆ: ಹಿಜಾಬ್‌ ಧರಿಸಲು ಅವಕಾಶಕ್ಕೆ ಆಗ್ರಹಿಸಿ ಪ್ರತಿಭಟನೆ
ಹೊಸಪೇಟೆ: ಹಿಜಾಬ್‌ ಧರಿಸಲು ಅವಕಾಶಕ್ಕೆ ಆಗ್ರಹಿಸಿ ಪ್ರತಿಭಟನೆ   

ಹೊಸಪೇಟೆ (ವಿಜಯನಗರ): ಪದವಿಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಹೆಣ್ಣು ಮಕ್ಕಳಿಗೆ ಸಮವಸ್ತ್ರದ ಜೊತೆಗೆ ಅದೇ ಬಣ್ಣದ ಹಿಜಾಬ್‌ ಧರಿಸಲು ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮಹಿಳಾ ಹಕ್ಕು ಸಂರಕ್ಷಣಾ ಸಮಿತಿ ಕಾರ್ಯಕರ್ತೆಯರು ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹಿಜಾಬ್‌ ಧರಿಸಿಕೊಂಡು ಬರುತ್ತಿದ್ದಾರೆ ಎಂಬ ಕಾರಣಕ್ಕಾಗಿ ಉಡುಪಿಯ ಕೆಲ ಕಾಲೇಜುಗಳಲ್ಲಿ ಹುಡುಗಿಯರಿಗೆ ಶಾಲಾ, ಕಾಲೇಜಿಗೆ ಬರಲು ನಿರ್ಬಂಧಿಸಲಾಗುತ್ತಿದೆ. ಇದು ಅಸಂವಿಧಾನಿಕ ನಡೆ. ಇದು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ತಿಳಿಸಿದರು.

ಹಿಜಾಬ್‌ ಧರಿಸಿದ ಯುವತಿಯರನ್ನು ಕಾಲೇಜು ಹೊರಗಡೆ ನಿಲ್ಲಿಸಿ ಅಮಾನವೀಯವಾಗಿ ನಡೆಸಿಕೊಳ್ಳುತ್ತಿರುವುದು ಸರಿಯಲ್ಲ. ಇಸ್ಲಾಂ ಧರ್ಮದ ಪ್ರಕಾರ ಹೆಣ್ಣು ಮಕ್ಕಳು ಹಿಜಾಬ್‌ ಧರಿಸುವುದು ಕಡ್ಡಾಯ. ಪ್ರತಿಯೊಬ್ಬರ ಧಾರ್ಮಿಕ ಆಚರಣೆಗೆ ಅವಕಾಶ ಮಾಡಿಕೊಡಬೇಕೆಂದು ಸಂವಿಧಾನವೂ ಹೇಳಿದೆ. ಧಾರ್ಮಿಕ ಸ್ವಾತಂತ್ರ್ಯ ಖಾತ್ರಿಪಡಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ADVERTISEMENT

ಸಂಘಟನೆಯ ನಾಯಕಿ ಆರೀಫಾ ಸೇರಿದಂತೆ ಹಲವರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.