ADVERTISEMENT

ಶಾಂತಿ, ಸೌಹಾರ್ದತೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಮೇ 2022, 12:21 IST
Last Updated 17 ಮೇ 2022, 12:21 IST
 ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಸಂಘಟನೆ ಕಾರ್ಯಕರ್ತರು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು
ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಸಂಘಟನೆ ಕಾರ್ಯಕರ್ತರು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು   

ಹೊಸಪೇಟೆ (ವಿಜಯನಗರ): ಬಾಬ್ರಿ ಮಸೀದಿ ಮಾದರಿಯಲ್ಲೇ ಕಾಶಿಯ ಜ್ಞಾನವಾಪಿ ಮಸೀದಿಯನ್ನು ಧ್ವಂಸಗೊಳಿಸಿ ಶಾಂತಿ, ಸೌಹಾರ್ದತೆ ಕದಡಲು ಕೆಲವು ಶಕ್ತಿಗಳು ಪ್ರಯತ್ನಿಸುತ್ತಿದ್ದು, ಅದನ್ನು ತಡೆಯುವಂತೆ ಆಗ್ರಹಿಸಿ ಸೋಷಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಸಂಘಟನೆ ಕಾರ್ಯಕರ್ತರು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸಂಘದ ಉಪಾಧ್ಯಕ್ಷ ನಜೀರ್ ಖಾನ್ ಮಾತನಾಡಿ, ಬಾಬ್ರಿ ಮಸೀದಿ ವಿನಾಶದ ರೀತಿಯಲ್ಲೇ ಜ್ಞಾನವಾಪಿ ಮಸೀದಿ ವಿಷಯ ಮಾಡಲಾಗುತ್ತಿದೆ. ಇದು ಸರಿಯಾದ ಕ್ರಮವಲ್ಲ. ಧರ್ಮದ ವಿಷಯದಲ್ಲಿ ಶಾಂತಿ, ಸೌಹಾರ್ದತೆ ಹಾಳು ಮಾಡುವ ಕುಕೃತ್ಯಗಳನ್ನು ನಿಯಂತ್ರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಎಸ್‌ಡಿಪಿಐ ಜಿಲ್ಲಾ ಅಧ್ಯಕ್ಷ ವಲಿ ಬಾಷ, ಪ್ರಧಾನ ಕಾರ್ಯದರ್ಶಿ ಹಬೀಬುಲ್ಲಾ, ಕಾರ್ಯದರ್ಶಿ ಇರ್ಫಾನ್ ಕಟಗಿ, ಸದ್ದಾಂ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.