ADVERTISEMENT

ಹರಪನಹಳ್ಳಿ | ಬಸ್ ಹತ್ತಿಸಿಕೊಳ್ಳಲು ಹಿಂದೇಟು: ವಿದ್ಯಾರ್ಥಿಗಳಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2024, 14:11 IST
Last Updated 25 ಅಕ್ಟೋಬರ್ 2024, 14:11 IST
ಹರಪನಹಳ್ಳಿ ಬಸ್ ನಿಲ್ದಾಣದಲ್ಲಿ ಎಐಎಸ್‍ಎಫ್, ಎಐವೈಎಫ್ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿ ನಿಲ್ದಾಣದ ನಿಯಂತ್ರಣಾಧಿಕಾರಿಗೆ ಮನವಿ ಸಲ್ಲಿಸಿದರು
ಹರಪನಹಳ್ಳಿ ಬಸ್ ನಿಲ್ದಾಣದಲ್ಲಿ ಎಐಎಸ್‍ಎಫ್, ಎಐವೈಎಫ್ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿ ನಿಲ್ದಾಣದ ನಿಯಂತ್ರಣಾಧಿಕಾರಿಗೆ ಮನವಿ ಸಲ್ಲಿಸಿದರು   

ಹರಪನಹಳ್ಳಿ: ಶಾಲಾ– ಕಾಲೇಜು ವಿದ್ಯಾರ್ಥಿಗಳ ಬಸ್ ಹತ್ತಿಸಿಕೊಳ್ಳಲು ಹಿಂದೇಟು ಹಾಕುತ್ತಿರುವ ಚಾಲಕ ಮತ್ತು ನಿರ್ವಾಹಕರ ವರ್ತನೆ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್ (ಎಐಎಸ್‍ಎಫ್), ಅಖಿಲ ಭಾರತ ಯುವಜನ ಫೆಡರೇಷನ್ (ಎಐವೈಎಫ್) ನೇತೃತ್ವದಲ್ಲಿ ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ಶುಕ್ರವಾರ ದಿಢೀರ್ ಪ್ರತಿಭಟನೆ ನಡೆಸಿದರು.

ಪಟ್ಟಣದಿಂದ ಅನಂತನಹಳ್ಳಿ ಬಳಿ ಇರುವ ಆದರ್ಶ ವಿದ್ಯಾಲಯ, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಐಟಿಐ ಕಾಲೇಜಿಗೆ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗಕ್ಕೆ ತೆರಳುತ್ತಾರೆ. ಇವರೆಲ್ಲರೂ ಸಾರಿಗೆ ಬಸ್ ಅವಲಂಬಿಸಿರುವ ಪರಿಣಾಮ, ಸಾರಿಗೆ ಬಸ್ ಚಾಲಕರು ಮತ್ತು ನಿರ್ವಾಹಕರು ವಿದ್ಯಾರ್ಥಿಗಳನ್ನು ಕರೆದೊಯ್ಯದೇ ನಿರ್ಲಕ್ಷಿಸುತ್ತಾರೆ. ಅವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.

ಆದರ್ಶ ವಿದ್ಯಾಲಯ ಮತ್ತು ಡಿಪ್ಲೊಮಾ ಕಾಲೇಜು ಬಳಿ ಸಾರಿಗೆ ಬಸ್ ನಿಲುಗಡೆ ಫಲಕ ಅಳವಡಿಸಿ, ಸಿಬ್ಬಂದಿ ನಿಯೋಜಿಸಬೇಕು. ಬಸ್ ನಿಲ್ದಾಣದಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಆರಂಭಿಸಬೇಕು. ಶೌಚಾಲಯದಲ್ಲಿ ಬೇಕಾಬಿಟ್ಟಿ ಹಣ ವಸೂಲಿ ಮಾಡುವ ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.