ADVERTISEMENT

ಹಿರೇಹಡಗಲಿ ಠಾಣೆ ಪಿಎಸ್‌ಐ ನಿಧನ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2025, 6:35 IST
Last Updated 18 ಅಕ್ಟೋಬರ್ 2025, 6:35 IST
   

ಹೊಸಪೇಟೆ (ವಿಜಯನಗರ): ಹೂವಿನಹಡಗಲಿ ತಾಲ್ಲೂಕು ಹಿರೇಹಡಗಲಿ ಪೊಲೀಸ್ ಠಾಣೆಯ ಕ್ರೈಂ ಪಿಎಸ್‌ಐ ತಿಮ್ಮಪ್ಪ ಜೋಗಿನ (59) ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಆಸ್ಪತ್ರೆಯಲ್ಲಿ ನಿಧನರಾದರು.

ಈಚೆಗೆ ಪಾರ್ಶ್ವವಾಯು ಪೀಡಿತರಾಗಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. 

ಮೂಲತಃ ಹರಪನಹಳ್ಳಿ ಪಟ್ಟಣದವರಾದ ತಿಮ್ಮಪ್ಪ ಅವರು 32 ವರ್ಷ ಕಾಲ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದು, ಮುಂದಿನ ವರ್ಷ ನಿವೃತ್ತರಾಗಲಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.