
ಪ್ರಜಾವಾಣಿ ವಾರ್ತೆ
ಹೂವಿನಹಡಗಲಿ: ಇಲ್ಲಿನ ಛಾಯಾಗ್ರಾಹಕ ಬಸೆಟ್ಟಿ ಸಿದ್ದೇಶ ಅವರ ಪುತ್ರ ಬಿ.ಆದರ್ಶ ಅವರು ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಸಿವಿಲ್), ಸಹಕಾರ ಸಂಘಗಳ ನಿರೀಕ್ಷಕ, ಕಾರ್ಮಿಕ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ, ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾಗಿದ್ದು, ಪಿಎಸ್‌ಐ ಹುದ್ದೆ ನೆಚ್ಚಿಕೊಂಡಿದ್ದಾರೆ.
ಕಳೆದ ವರ್ಷ ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ರಾಜ್ಯಮಟ್ಟದಲ್ಲಿ ಉನ್ನತ ರ‍್ಯಾಂಕ್ ಗಳಿಸಿ ಆಯ್ಕೆಯಾಗಿದ್ದರು. ಕಳೆದ ತಿಂಗಳು ಸಹಕಾರ ಸಂಘಗಳ ನಿರೀಕ್ಷಕರಾಗಿ ಸೇವೆಗೆ ಸೇರಿದ್ದರು.
ಸೆ.10ರಂದು 402 ಪಿಎಸ್‌ಐ ಹುದ್ದೆಗಳ ನೇಮಕಾತಿಯ ಅಂತಿಮ ಪಟ್ಟಿಯನ್ನು ಸರ್ಕಾರ ಪ್ರಕಟಿಸಿದ್ದು, ಆದರ್ಶ್ 2ನೇ ರ‍್ಯಾಂಕ್ ಗಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.