ಸಂಜನಾಬಾಯಿ
ಕೊಟ್ಟೂರು (ವಿಜಯನಗರ ಜಿಲ್ಲೆ): ಇಲ್ಲಿನ ಇಂದೂ ಪಿಯು ಕಾಲೇಜಿನ ವಿದ್ಯಾರ್ಥಿನಿ ಸಂಜನಾಬಾಯಿ 600ಕ್ಕೆ 597 ಅಂಕ ಪಡೆಯುವ ಮೂಲಕ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.
ಇಂದೂ ಪಿಯು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದ 12 ಮಂದಿ ಕಲಾ ವಿಭಾಗದಲ್ಲಿ ಟಾಪ್ 10 ಒಳಗೆ ಇದ್ದಾರೆ.
ಸಂಜನಾಬಾಯಿ ಲಾರಿ ಚಾಲಕನ ಮಗಳು. ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದ ಸಂಜನಾಬಾಯಿ ಅವರು ಊರಿಗೆ ಬಸ್ ಸಂಪರ್ಕ ಇಲ್ಲ. ಹೀಗಿದ್ದರೂ ಅವರು ಸಾಧನೆ ಎಲ್ಲರ ಗಮನ ಸೆಳೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.