ADVERTISEMENT

ಹೂವಿನಹಡಗಲಿ| ಹೊಳಲು ಭಾಗದಲ್ಲಿ ಉತ್ತಮ ಮಳೆ : ಮನೆಗಳಿಗೆ ನುಗ್ಗಿದ ನೀರು

​ಪ್ರಜಾವಾಣಿ ವಾರ್ತೆ
Published 19 ಜೂನ್ 2023, 16:18 IST
Last Updated 19 ಜೂನ್ 2023, 16:18 IST
ಗೋಣಿಕೊಪ್ಪಲಿಗೆ ಗುರುವಾರ ಸಂಜೆ ಉತ್ತಮ ಮಳೆ ಬಿದ್ದಿತು
ಗೋಣಿಕೊಪ್ಪಲಿಗೆ ಗುರುವಾರ ಸಂಜೆ ಉತ್ತಮ ಮಳೆ ಬಿದ್ದಿತು   

ಹೂವಿನಹಡಗಲಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಹೊಳಲು ಸುತ್ತಮುತ್ತಲ ಗ್ರಾಮಗಳಲ್ಲಿ ಸೋಮವಾರ ಸಂಜೆ ಉತ್ತಮ ಮಳೆಯಾಗಿದೆ.

ಹೊಳಲು ಗ್ರಾಮದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ರಭಸದಿಂದ ಮಳೆ ಸುರಿಯಿತು. ಬಸವೇಶ್ವರ ನಗರ ಮತ್ತು ರೊಟ್ಟಿಯವರ ಓಣಿಯ ಹತ್ತಾರು ಮನೆಗಳಿಗೆ ನೀರು ನುಗ್ಗಿದ್ದರಿಂದ ನಿವಾಸಿಗಳು ತೊಂದರೆ ಅನುಭವಿಸಿದರು. ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಧಾನ್ಯ, ಬಟ್ಟೆ, ಪಾತ್ರೆಗಳು ನೀರು ಪಾಲಾದವು. ಮನೆಯೊಳಗೆ ನುಗ್ಗಿದ್ದ ನೀರನ್ನು ಹೊರ ಹಾಕಲು ಜನರು ಪ್ರಯಾಸಪಟ್ಟರು.

‘ಬಸವೇಶ್ವರ ನಗರದ ರಸ್ತೆ ಕಾಮಗಾರಿ ಕುಂಟುತ್ತಾ ಸಾಗಿದ್ದು, ಎರಡೂ ಬದಿಯ ಚರಂಡಿಗಳನ್ನು ವೈಜ್ಞಾನಿಕವಾಗಿ ನಿರ್ಮಿಸದ ಕಾರಣ ನೀರು ತಗ್ಗು ಪ್ರದೇಶಗಳಿಗೆ ನುಗ್ಗುವಂತಾಗಿದೆ. ಗ್ರಾಮ ಪಂಚಾಯಿತಿಯವರು ಚರಂಡಿಗಳ ಹೂಳು ತೆಗೆದು ಸ್ವಚ್ಛಗೊಳಿಸದಿರುವುದು ಸಮಸ್ಯೆಗೆ ಮತ್ತೊಂದು ಕಾರಣ ಎಂದು ನಿವಾಸಿಗಳು ಆರೋಪಿಸಿದರು.

ADVERTISEMENT

‘ರಸ್ತೆ ಮತ್ತು ಚರಂಡಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಚರಂಡಿಯ ಹೂಳು ತೆಗೆದು ಸ್ವಚ್ಛಗೊಳಿಸಿ, ಮಳೆಯ ನೀರು ಸರಾಗವಾಗಿ ಹರಿಯುವ ವ್ಯವಸ್ಥೆ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.