ತೋರಣಗಲ್ಲು: ಹೋಬಳಿಯ ವಡ್ಡು, ತಾಳೂರು, ಎಸ್.ಬಸಾಪುರ, ಬನ್ನಿಹಟ್ಟಿ, ನಾಗಲಾಪುರ, ಕುರೆಕುಪ್ಪ ಸೇರಿದಂತೆ ಇತರೆ ಗ್ರಾಮಗಳಲ್ಲಿ ಸೋಮವಾರ ಗುಡುಗು, ಸಿಡಿಲು, ಗಾಳಿ ಸಹಿತ ಕೆಲ ಕಾಲ ಸಾಧಾರಣ ಮಳೆ ಸುರಿಯಿತು.
ತಾಳೂರು, ವಡ್ಡು ಗ್ರಾಮದಲ್ಲಿ ಸುಮಾರು 40 ನಿಮಿಷಗಳ ಕಾಲ ಆಲಿಕಲ್ಲು ಸಹಿತ ಉತ್ತಮ ಮಳೆ ಸುರಿದಿದ್ದರಿಂದ ತಗ್ಗು ಪ್ರದೇಶಗಳಲ್ಲಿ ನೀರು ಸಂಗ್ರಹಗೊಂಡಿದೆ. ತೋರಣಗಲ್ಲು ಗ್ರಾಮ, ರೈಲ್ವೆ ನಿಲ್ದಾಣ ಪ್ರದೇಶ, ಕುರೆಕುಪ್ಪ ಗ್ರಾಮದಲ್ಲಿ ಸಾಧಾರಣ ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.