ಹರಪನಹಳ್ಳಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ವಿವಿಧೆಡೆ ಬುಧವಾರ ಮಧ್ಯರಾತ್ರಿ ಸುರಿದ ಮಳೆಗೆ ಪುಣಬಗಟ್ಟಿ ಗ್ರಾಮದಲ್ಲಿ ಕೆರೆ ಕೋಡಿ ಬಿದ್ದು 200ಕ್ಕೂ ಅಧಿಕ ಎಕರೆ ಭತ್ತದ ಬೆಳೆ ನಾಶವಾಗಿದೆ.
ತಾಲ್ಲೂಕಿನ ಅರಸೀಕೆರೆ ಹೋಬಳಿಯ ಪುಣಬಘಟ್ಟ, ಕುರೆಮಾಗನಹಳ್ಳಿ, ತುಂಬಿಗೆರೆ, ಉಚ್ಚಂಗಿದುರ್ಗ ಗ್ರಾಮಗಳಲ್ಲಿ ಬುಧವಾರ ರಾತ್ರಿ ಉತ್ತಮ ಮಳೆ ಸುರಿದಿತ್ತು. ಇದರಿಂದ ಕುರೆಮಾಗನಹಳ್ಳಿಯಲ್ಲಿ ಚೆಕ್ ಡ್ಯಾಂ ಭರ್ತಿಯಾಗಿದೆ. ಉಚ್ಚಂಗಿದುರ್ಗ-ಅರಸೀಕೆರೆ ರಸ್ತೆ ಜಲಾವೃತಗೊಂಡಿದೆ. ಜಂಗಮ ತುಂಬಿಗೆರೆಯಲ್ಲಿ ಹಳ್ಳ ಭರ್ತಿಯಾಗಿ ಕೋಡಿ ಬಿದ್ದಿದೆ.
ಮತ್ತೊಂದೆಡೆ ಕೂಡ್ಲಿಗಿ ಭಾಗದಲ್ಲಿ ಉತ್ತಮ ಮಳೆಸುರಿದು, ಅಗ್ರಹಾರ ಗ್ರಾಮದ ಬಳಿ ಮೆಕ್ಕೆಜೋಳ ಹೊಲಕ್ಕೆ ನೀರು ನುಗ್ಗಿದೆ. ಹೊಸಪೇಟೆ, ಮರಿಯಮ್ಮನಹಳ್ಳಿ, ಕಮಲಾಪುರ ಭಾಗದಲ್ಲಿ ಸಹ ಗುರುವಾರ ಬೆಳಿಗ್ಗೆ 2 ಗಂಟೆ ಹೊತ್ತು ಉತ್ತಮ ಮಳೆ ಸುರಿಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.