ADVERTISEMENT

ಹೊಸಪೇಟೆ: ಜಿಲ್ಲೆಯ ಹಲವೆಡೆ ಉತ್ತಮ ಮಳೆ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2021, 12:29 IST
Last Updated 6 ಅಕ್ಟೋಬರ್ 2021, 12:29 IST
ಹೊಸಪೇಟೆಯಲ್ಲಿ ಬುಧವಾರ ಸುರಿವ ಮಳೆಯಲ್ಲೇ ಕಾಲೇಜು ವಿದ್ಯಾರ್ಥಿನಿಯರು ನಡೆದುಕೊಂಡು ಹೋದರು
ಹೊಸಪೇಟೆಯಲ್ಲಿ ಬುಧವಾರ ಸುರಿವ ಮಳೆಯಲ್ಲೇ ಕಾಲೇಜು ವಿದ್ಯಾರ್ಥಿನಿಯರು ನಡೆದುಕೊಂಡು ಹೋದರು   

ಹೊಸಪೇಟೆ (ವಿಜಯನಗರ): ಜಿಲ್ಲೆಯ ವಿವಿಧೆಡೆ ಬುಧವಾರ ಉತ್ತಮ ಮಳೆಯಾಗಿದೆ.

ನಗರದಲ್ಲಿ ದಿನವಿಡೀ ಬಿಟ್ಟು ಬಿಟ್ಟು ಮಳೆಯಾಯಿತು. ಜಿಲ್ಲೆಯ ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲೂ ಇದೇ ಪರಿಸ್ಥಿತಿ ಇತ್ತು. ಸತತ ಮಳೆ ಸುರಿದ ಕಾರಣ ವಾತಾವರಣ ಸಂಪೂರ್ಣ ತಂಪಾಗಿತ್ತು.

ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಮಳೆ ಬಿಡುವು ಕೊಟ್ಟಿತ್ತು. ಆದರೆ, ರಾತ್ರಿ ಪುನಃ ಮಳೆಯಾಗಿದೆ. ಬುಧವಾರ ಬೆಳಿಗ್ಗೆ ಆರಂಭಗೊಂಡ ಮಳೆ ಬಿಟ್ಟು ಬಿಟ್ಟು ಸಂಜೆಯ ವರೆಗೆ ಸುರಿದಿದೆ.

ADVERTISEMENT

ತಾಲ್ಲೂಕಿನ ಹೊಸೂರು, ನಾಗೇನಹಳ್ಳಿ, ಧರ್ಮದಗುಡ್ಡ, ಕೊಂಡನಾಯಕನಹಳ್ಳಿ, ಗಾಳೆಮ್ಮನಗುಡಿ, ಕಡ್ಡಿರಾಂಪುರ, ಹಂಪಿ, ಕಮಲಾಪುರ, ಬುಕ್ಕಸಾಗರ, ವಡ್ಡರಹಳ್ಳಿ, ಪಾಪಿನಾಯಕನಹಳ್ಳಿ ಸೇರಿದಂತೆ ಹಲವೆಡೆ ಮಳೆಯಾಗಿರುವುದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.