ಸಾವು (ಸಾಂದರ್ಭಿಕ ಚಿತ್ರ)
ಗೆಟ್ಟಿ ಚಿತ್ರ
ಹರಪನಹಳ್ಳಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ವ್ಯಾಸನತಾಂಡ ಕ್ರಾಸ್ ಬಳಿ ಮಂಗಳವಾರ ಅಪರಿಚಿತ ವಾಹನ ಡಿಕ್ಕಿಯಾಗಿದ್ದರಿಂದ ಕೊಟ್ಟೂರಿಗೆ ಕಾಲ್ನಡಿಗೆಯಲ್ಲಿ ಯಾತ್ರೆ ಮಾಡುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ರಾಣೆಬೆನ್ನೂರು ನಗರದ ದೊಡ್ಡಪೇಟೆ ನಿವಾಸಿ ಪುಷ್ಪಾ ಅನಿಶೆಟ್ಟರ್ (55) ಮೃತರು. ತಮ್ಮ ಸಂಗಡಿಗರೊಂದಿಗೆ ಸೋಮವಾರ ಬೆಳಗಿನ ಜಾವ ರಾಣೆಬೆನ್ನೂರು ಬಿಟ್ಟು, ನೀಲಗುಂದದಲ್ಲಿ ವಾಸ್ತವ್ಯ ಮಾಡಿದ್ದರು.
ಬೆಳಿಗ್ಗೆ ನೀಲಗುಂದದಿಂದ ಕಾಲ್ನಡಿಗೆ ಆರಂಭಿಸಿ ಹರಪನಹಳ್ಳಿಯತ್ತ ಹೊರಟಿದ್ದಾಗ, ಶಿವಮೊಗ್ಗ ಹೊಸಪೇಟೆ ರಾಜ್ಯ ಹೆದ್ದಾರಿ 25ರಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ರಸ್ತೆಗೆ ಬಿದ್ದು, ಬಲವಾದ ಪೆಟ್ಟು ಬಿದ್ದಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಹರಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.