ಹೂವಿನಹಡಗಲಿ: ಯುವತಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಇಲ್ಲಿನ ಅಕ್ಷರ ದಾಸೋಹ ಬಿಸಿಯೂಟ ಯೋಜನೆ ಸಹಾಯಕ ನಿರ್ದೇಶಕ ಕಚೇರಿಯ ಎಫ್‌ಡಿಎ ಬಿ.ಎಸ್. ಪುಷ್ಪಾಬಾಯಿ ಅವರನ್ನು ವಿಜಯನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ ಅವರು ಸೇವೆಯಿಂದ ಅಮಾನತುಗೊಳಿಸಿದ್ದಾರೆ.
‘ಬಿ.ಎಸ್. ಪುಷ್ಪಾಬಾಯಿ ಕರ್ನಾಟಕ ನಾಗರಿಕ ಸೇವಾ ನಿಯಮ ಉಲ್ಲಂಘಿಸಿ, ಕರ್ತವ್ಯಲೋಪ ಎಸಗಿರುವುದು ಮೇಲ್ನೋಟಕ್ಕೆ ದೃಢಪಟ್ಟಿರುವುದರಿಂದ ಮುಂದಿನ ಆದೇಶದವರೆಗೆ ಅವರನ್ನು ಅಮಾನತುಗೊಳಿಸಲಾಗಿದೆ’ ಎಂದು ಅಮಾನತು ಆದೇಶದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.