ADVERTISEMENT

ವಿಜಯನಗರ | ಸಂವಿಧಾನವನ್ನು ಸರ್ವರೂ ಗೌರವಿಸಿ: ಜಿಲ್ಲಾಧಿಕಾರಿ ಕವಿತಾ ಕರೆ

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕವಿತಾ ಕರೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2025, 4:25 IST
Last Updated 16 ಸೆಪ್ಟೆಂಬರ್ 2025, 4:25 IST
ಹೊಸಪೇಟೆಯಲ್ಲಿ ಸೋಮವಾರ ಜಿಲ್ಲಾಡಳಿತ ಜಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ಸೈಕಲ್ ಜಾಥಾಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಹೊಸಪೇಟೆಯಲ್ಲಿ ಸೋಮವಾರ ಜಿಲ್ಲಾಡಳಿತ ಜಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ಸೈಕಲ್ ಜಾಥಾಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ ಅವರು ಪ್ರತಿಜ್ಞಾವಿಧಿ ಬೋಧಿಸಿದರು.   

ಹೊಸಪೇಟೆ(ವಿಜಯನಗರ): ಪ್ರಜಾಪ್ರಭುತ್ವವು ಆಯಾ ದೇಶದ ಜನರಿಂದ ಶಕ್ತಿ ಪಡೆದು, ಜನರ ಧ್ವನಿ, ಆಯ್ಕೆಗಳು ಮತ್ತು ಸಮಾಜ ರೂಪಿಸುವುದರ ಜೊತೆಗೆ ಅವರ ಭಾಗವಹಿಸುವಿಕೆ, ಹಕ್ಕುಗಳನ್ನು ರಕ್ಷಿಸಿದಾಗ ಮಾತ್ರ ಅಭಿವೃದ್ಧಿ ಹೊಂದುತ್ತದೆ ಎಂದು ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ ಹೇಳಿದರು.

ನಗರದಲ್ಲಿ ಸೋಮವಾರ ಜಿಲ್ಲಾಡಳಿತ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ಸೈಕಲ್ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮತ್ತು ಸಂವಿಧಾನ ನೀಡಿರುವ ಹಕ್ಕು ಮತ್ತು ಕರ್ತವ್ಯಗಳನ್ನು ಅರಿಯಲು ಈ ದಿನಾಚರಣೆ ಸಹಕಾರಿಯಾಗಲಿದೆ. ಸಂವಿಧಾನವನ್ನು ಪ್ರತಿಯೊಬ್ಬರೂ ಗೌರವಿಸಬೇಕು. ಅದರ ಆಶಯಗಳ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ಜನರ ಸಾರ್ವಭೌಮತ್ವವನ್ನು ಎತ್ತಿ ಹಿಡಿಯುವ ಒಂದು ಆಡಳಿತ ವ್ಯವಸ್ಥೆಯಾಗಿದೆ. ಅಲ್ಲದೆ ಸಮಾಜದ ಎಲ್ಲ ವರ್ಗಗಳ ಸಮಾನತೆಗೆ, ಭಾಗವಹಿಸುವಿಕೆ ಉತ್ತೇಜಿಸುತ್ತದೆ ಎಂದರು.

ಜಿಲ್ಲಾ ಪಂಚಾಯತ್ ಸಿಒಇ ನೋಂಗ್ಜಾಯ್ ಮೋಹಮ್ಮದ್ ಅಕ್ರಮ್ ಅಲಿ ಮಾತನಾಡಿ, ಪ್ರಜಾಪ್ರಭುತ್ವವು ದೇಶದ ನಾಗರೀಕರನ್ನು ಸಬಲೀಕರಣಗೊಳಿಸುವ ಮತ್ತು ಅವರಿಗೆ ನ್ಯಾಯಯುತ, ಘನತೆಯ ಜೀವನ ಒದಗಿಸುವ ಒಂದು ಆಡಳಿತ ವ್ಯವಸ್ಥೆ. ಮತ್ತು ಪ್ರಜಾಪ್ರಭುತ್ವದ ಮೌಲ್ಯ ಮತ್ತು ಆಡಳಿತದ ಮಹತ್ವವನ್ನು ಎತ್ತಿ ತೋರಿಸುತ್ತದೆ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎನ್.ಎಫ್.ಇಮಾಮ್ ನಿಯಾಜಿ, ಉಪವಿಭಾಗಾಧಿಕಾರಿ ಪಿ.ವಿವೇಕಾನಂದ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಟಿ.ಮಂಜುನಾಥ, ಡಿಡಿಪಿಐ ವೆಂಕಟೇಶ್ ರಾಮಚಂದ್ರಪ್ಪ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.