ADVERTISEMENT

ವಿಜಯನಗರ: ಮರು ಸಮೀಕ್ಷೆಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2025, 3:15 IST
Last Updated 23 ಸೆಪ್ಟೆಂಬರ್ 2025, 3:15 IST
ಶ್ವೇತಾ ಎಸ್‌.
ಶ್ವೇತಾ ಎಸ್‌.   

ಹೊಸಪೇಟೆ: ಮಾಜಿ ದೇವದಾಸಿ ಮಹಿಳೆಯರ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಮರು ಸಮಿಕ್ಷೆಗೆ ಮೂರು ರೀತಿಯ ಅರ್ಜಿಯ ನಮೂನೆಗಳಿಗೆ ಅರ್ಜಿಗಳನ್ನು ನಿಗದಿಪಡಿಸಲಾಗಿದೆ.

ಸರ್ಕಾರದಿಂದ 1993-94 ಮತ್ತು 2007-08ನೇ ಸಾಲುಗಳಲ್ಲಿ ನಡೆಸಲಾದ ಸಮೀಕ್ಷೆಯಲ್ಲಿ ಹೆಸರು ನೊಂದಣಿಯಾಗಿದ್ದು, ಮರಣ ಹೊಂದಿರುವ ಮಹಿಳೆಯ ಕುಟುಂಬದ ಅಧಿಕೃತ ಸದಸ್ಯರು ಭರ್ತಿ ಮಾಡಿ ಕೊಡಬೇಕಾದ ಅರ್ಜಿ ನಮೂನೆ-1 ರಲ್ಲಿ ಸಲ್ಲಿಸಬೇಕು. ಈ ಹಿಂದೆ 1993-94 ಮತ್ತು 2007-08 ಸಾಲುಗಳಲ್ಲಿ ನಡೆಸಲಾದ ಸಮೀಕ್ಷೆಯಲ್ಲಿ ಹೆಸರು ನೋಂದಣಿಯಾಗದೇ ಹೊರಗುಳಿದ. ಹಾಲಿ ಜೀವಂತವಿರುವ ಹೊಸದಾಗಿ ದೇವದಾಸಿ ಪಟ್ಟಿಗೆ ಸೇರ್ಪಡೆಗೊಳ್ಳಲು ಬಯಸುವ ಮಾಜಿ ದೇವದಾಸಿ ಮಹಿಳೆಯರು ಭರ್ತಿ ಮಾಡಿ ಕೊಡಬೇಕಾದ ಅರ್ಜಿ ನಮೂನೆ-2ರಲ್ಲಿ ಸಲ್ಲಿಸಬೇಕು. ಈ ಹಿಂದೆ 1993-94 ಮತ್ತು 2007-08 ನೇ ಸಾಲಿನಲ್ಲಿ ನಡೆಸಲಾದ ಸಮೀಕ್ಷೆಯಲ್ಲಿ ಹೆಸರು ನೋಂದಣಿಯಾಗದೆ ಹೊರಗುಳಿದ ಮತ್ತು ಪ್ರಸ್ತುತ ಮರಣ ಹೊಂದಿರುವ ಮಹಿಳೆಯರ ಕುಟುಂಬದ ಅಧಿಕೃತ ಸದಸ್ಯರು ಭರ್ತಿ ಮಾಡಿ ಕೊಡಬೇಕಾದ ಅರ್ಜಿ ನಮೂನೆ-3 ರಲ್ಲಿ ಸಲ್ಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಎಸ್.ಶ್ವೇತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳಾದ ಮಹಿಳೆಯ ಆಧಾರ ಕಾರ್ಡ್ ಮೊಬೈಲ್ ನಂಬರ್ ಲಿಂಕ್ ಇರುವ ಮೊಬೈಲ್ ಸಂಖ್ಯೆ, ಮಹಿಳೆಯ ಮರಣ ಪ್ರಮಾಣ ಪತ್ರ, ವಂಶವೃಕ್ಷ, ಕುಟುಂಬದ ಅಧಿಕೃತ ಸದಸ್ಯರ ಆಧಾರ ಕಾರ್ಡ್, ಹೊಸ ಸೇರ್ಪಡೆ ಬಯಸುವ ಮಹಿಳೆಯರ ವಯಸ್ಸಿನ ದೃಢೀಕರಣ, ವೈದ್ಯಕೀಯ ದೃಢೀಕರಣ ಪತ್ರ, ಶಾಲಾ ದಾಖಲಾತಿ ಪತ್ರ, ಬ್ಯಾಂಕ್ ಪಾಸ್ ಪುಸ್ತಕ, ಪಡಿತರ ಚೀಟಿ, ಜಾತಿ ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರಗಳೊಂದಿಗೆ ಅರ್ಜಿಗಳನ್ನು ಸಂಬಂಧಪಟ್ಟ ತಾಲ್ಲೂಕುಗಳ ಸಿಡಿಪಿಒ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳಿಗೆ ಆ.4 ರೊಳಗೆ ಅರ್ಜಿ ಸಲ್ಲಿಸಬೇಕೆಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.