ADVERTISEMENT

ನದಿ ಜೋಡಣೆಯಿಂದ ರೈತರಿಗೆ ಅನುಕೂಲ: ಅನಂತ ಪದ್ಮನಾಭ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2022, 8:13 IST
Last Updated 12 ಫೆಬ್ರುವರಿ 2022, 8:13 IST
   

ಹೊಸಪೇಟೆ (ವಿಜಯನಗರ): ‘ದೇಶದಲ್ಲಿನ ನದಿಗಳ ಜೋಡಣೆಯಿಂದ ರೈತರಿಗೆ ಬಹಳ ಅನುಕೂಲವಾಗಲಿದೆ. ಕೇಂದ್ರ ಸರ್ಕಾರದ ಬಜೆಟ್‌ ದೇಶದ ಸಮಗ್ರ ಅಭಿವೃದ್ಧಿಯ ಆಶಯಗಳ‌ನ್ನು ಒಳಗೊಂಡಿದೆ’ ಎಂದು ಬಿಜೆಪಿ ಜಿಲ್ಲಾ ವಕ್ತಾರ ಅನಂತ ಪದ್ಮನಾಭ ಹೇಳಿದರು.

ಕೋವಿಡ್‌ನಿಂದ ದೇಶದ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ. ಹೀಗಿದ್ದರೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಯಾರಿಗೂ ಹೊರೆಯಾಗದ ರೀತಿಯಲ್ಲಿ ಬಜೆಟ್‌ ಮಂಡಿಸಿದ್ದಾರೆ ಎಂದು ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಧಾನಿ ಮೋದಿಯವರು ಕೋವಿಡ್‌ ಸಂಕಷ್ಟದ ಪರಿಸ್ಥಿತಿಯನ್ನು ಸೂಕ್ತ ರೀತಿಯಲ್ಲಿ ನಿಭಾಯಿಸಿದ್ದಾರೆ.

ADVERTISEMENT

ಆರೋಗ್ಯ ಕ್ಷೇತ್ರದ ಬಲವರ್ಧನೆಗೆ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್‌ ‘ಆತ್ಮನಿರ್ಭರ’ದ ದೂರದೃಷ್ಟಿ ಹೊಂದಿದೆ. ಕುಡಿಯುವ ನೀರು, ರಸ್ತೆ, ಕೃಷಿ ಸೇರಿದಂತೆ ಮೂಲಸೌಕರ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ಕೊಟ್ಟಿದ್ದಾರೆ. ಒಂದು ಕೋಟಿ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅನೇಕ ಹೊಸ ಯೋಜನೆಗಳನ್ನು ರೂಪಿಸಿದ್ದಾರೆ. ಹೈನುಗಾರಿಕೆಗೆ ಪ್ರತ್ಯೇಕವಾಗಿ ಹಣ ಮೀಸಲಿಟ್ಟಿದ್ದಾರೆ. ಹಲವು ಹೊಸ ರೈಲುಗಳನ್ನು ಘೋಷಿಸಿದ್ದು, ಪ್ರಯಾಣಿಕರಿಗೆ ಮತ್ತಷ್ಟು ಉತ್ತಮ ಸೌಲಭ್ಯಗಳು ಸಿಗಲಿವೆ ಎಂದರು.

ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಖಜಾಂಚಿ ಮನೋಹರ ಗುಪ್ತಾ, ಮಾಧ್ಯಮ ಸಂಚಾಲಕ ಸತ್ಯನಾರಾಯಣ, ಮುಖಂಡರಾದ ಕಟಗಿ ರಾಮಕೃಷ್ಣ, ಶಿವಶಂಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.