ADVERTISEMENT

ಕಾನಹೊಸಹಳ್ಳಿ: ಸರ್ಕಾರಿ ಶಾಲೆಗೆ ₹10 ಲಕ್ಷ ಧನಸಹಾಯ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2023, 13:21 IST
Last Updated 29 ನವೆಂಬರ್ 2023, 13:21 IST
ಹಿರೇಕುಂಬಳಗುಂಟೆ ಗ್ರಾಮದ ಹಿ.ಮ.ನಾಗಯ್ಯ ಸರ್ಕಾರಿ ಪ್ರೌಢಶಾಲೆಯಲ್ಲಿ ಉದ್ಯಮಿ ಹಿ.ಮ.ಹರ್ಷ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು
ಹಿರೇಕುಂಬಳಗುಂಟೆ ಗ್ರಾಮದ ಹಿ.ಮ.ನಾಗಯ್ಯ ಸರ್ಕಾರಿ ಪ್ರೌಢಶಾಲೆಯಲ್ಲಿ ಉದ್ಯಮಿ ಹಿ.ಮ.ಹರ್ಷ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು   

ಕಾನಹೊಸಹಳ್ಳಿ: ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳು ಮೂಲ ಸೌಕರ್ಯಗಳಿಂದ ವಂಚಿತವಾಗಿವೆ. ಇದರಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಅಗತ್ಯ ಸೌಲಭ್ಯ ಒದಗಿಸಿ ಕಲಿಕೆಗೆ ಪೂರಕ ವಾತಾವರಣ ಕಲ್ಪಿಸಬೇಕು ಎಂದು ಉದ್ಯಮಿ ಹಿ.ಮ.ಹರ್ಷ ಹೇಳಿದರು.

ಸಮೀಪದ ಗಡಿಗ್ರಾಮ ಹಿರೇಕುಂಬಳಗುಂಟೆ ಹಿ.ಮ.ನಾಗಯ್ಯ ಸರ್ಕಾರಿ ಪ್ರೌಢಶಾಲೆಗೆ ಮಂಗಳವಾರ ಭೇಟಿ ನೀಡಿ  ಮಾತನಾಡಿದ ಅವರು, ಗ್ರಾಮದಲ್ಲಿ ಹಿ.ಮ.ನಾಗಯ್ಯ ಅವರಂತಹ ಸಾಹಿತಿ, ಎಚ್.ಎಂ.ಮರುಳಸಿದ್ದಯ್ಯ ಅವರಂತಹ ಚಿಂತಕರು ಶಿಕ್ಷಣದ ಪ್ರಗತಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದರು. ಅವರ ಮಾರ್ಗದರ್ಶನದಲ್ಲೇ ನಾನು ಶಾಲೆಯ ಮಕ್ಕಳಿಗೆ ಶುದ್ಧ ಕುಡಿಯುವ ನೀರು, ಶೌಚಾಲಯ ಸೇರಿ ಅಗತ್ಯ ಸೌಲಭ್ಯ ಕಲ್ಪಿಸಬೇಕೆಂಬ ಉದ್ದೇಶದಿಂದ ಶಾಲೆಗೆ ₹10 ಲಕ್ಷ ಧನಸಹಾಯ ನೀಡಿರುವೆ ಎಂದರು.

ಶಾಲೆಯ ಶಿಕ್ಷಕರಿಂದ ಹಿ.ಮ.ಹರ್ಷ ಮತ್ತು ಮಮತಾ ದಂಪತಿಯನ್ನು ಸನ್ಮಾನಿಸಲಾಯಿತು.

ADVERTISEMENT

ಮುಖ್ಯಶಿಕ್ಷಕಿ ಸುಜಾತಾ, ಎಸ್‌ಡಿಎಂಸಿ ಅಧ್ಯಕ್ಷೆ ನಾಗರತ್ನಮ್ಮ, ಶಿಕ್ಷಕರಾದ ಜ್ಯೋತಿ, ರೇಷ್ಮಾ, ಅರುಣ್ ಕುಮಾರ್, ಸಿದ್ದರಾಮೇಶ್ವರ, ಸಿದ್ದಲಿಂಗಪ್ಪ, ಬಾಬುನಾಯ್ಕ, ಮಂಜುನಾಥ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.