ಹಗರಿಬೊಮ್ಮನಹಳ್ಳಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸ್ಥಾಪನೆಯಾಗಿ 100 ವರ್ಷ ಪೂರೈಸಿದ ಹಿನ್ನೆಲೆ ಪಟ್ಟಣದಲ್ಲಿ ಗಣವೇಷಧಾರಿಗಳು ಭಾನುವಾರ ಮಳೆಯಲ್ಲಿಯೇ ಪಥ ಸಂಚಲನ ನಡೆಸಿದರು.
ಹಳೇ ಊರಿನ ಅಂಬಾಭವಾನಿ ದೇವಸ್ಥಾನದಿಂದ ಬಸವೇಶ್ವರ ವೃತ್ತ, ರಾಜ್ಯ ಹೆದ್ದಾರಿಯ ಮುಖ್ಯ ರಸ್ತೆ, ಡಾ. ಬಿ.ಆರ್.ಅಂಬೇಡ್ಕರ್ ವೃತ್ತ, ತೇರು ಬೀದಿ, ಕೂಡ್ಲಿಗಿ ವೃತ್ತದ ಮೂಲಕ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ವಿದ್ಯಾರಣ್ಯ ಸಭಾಮಂಟಪದವರೆಗೂ ಪಥಸಂಚಲನ ಸಾಗಿತು.
ಮಾರ್ಗದುದಕ್ಕೂ ಗಣವೇಷಧಾರಿಗಳ ಮೇಲೆ ಪುಷ್ಪಸುರಿಮಳೆ ಗೈಯಲಾಗಿತು. ಪೊಲೀಸರು ಭಾರಿ ಬಂದೋಬಸ್ತ್ ಒದಗಿಸಿದ್ದರು. ಸಿಪಿಐ ವಿಕಾಸ್ ಲಮಾಣಿ, ಪಿಎಸ್‌ಐ ಬಸವರಾಜ ಅಡವಿಬಾವಿ ಮಳೆಯಲ್ಲಿಯೇ ಪಥಸಂಚಲನದ ಜತೆ ಹೆಜ್ಜೆ ಹಾಕಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಹೆಚ್ಚುವರಿ ಎಸ್‍ಪಿ ಜಿ.ಮಂಜುನಾಥ, ಡಿವೈಎಸ್‍ಪಿ ಮಲ್ಲೇಶ್ ದೊಡ್ಡಮನಿ ಪಟ್ಟಣದಲ್ಲಿ ಮೊಕ್ಕಾಂ ಹೂಡಿದ್ದರು. ನಂದಿಪುರದ ಮಹೇಶ್ವರ ಸ್ವಾಮೀಜಿ, ಹಾಲಸಿದ್ದೇಶ್ವರ ಸ್ವಾಮೀಜಿ, ಶಿವಪ್ರಕಾಶ ಸ್ವಾಮೀಜಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.