ಹೊಸಪೇಟೆ (ವಿಜಯನಗರ): ‘ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ತಿಳಿಸುವ ಮತ್ತು ಒಂದು ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸುವ ಸಮಾವೇಶ ಮೇ 20ರಂದು ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.
‘ಸಮಾವೇಶದ ಸಿದ್ಧತೆ ಪರಿಶೀಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 16ರಂದು ಭೇಟಿ ನೀಡುವರು. ನಾನು ಒಂದು ವಾರ ಇಲ್ಲೇ ಉಳಿದು, ಎಲ್ಲವನ್ನೂ ನೋಡಿಕೊಳ್ಳುವೆ’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.
‘ಅಂದಿನ ಸಮಾವೇಶದಲ್ಲಿ ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿ ರಾಜ್ಯದ ಎಲ್ಲಾ ಸಚಿವರು ಸಮಾವೇಶದಲ್ಲಿ ಪಾಲ್ಗೊಳ್ಳುವರು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.