ADVERTISEMENT

ಹೊಸ ಮದ್ಯದಂಗಡಿ: ಸಾಣೆಹಳ್ಳಿ ಶ್ರೀ ವಿರೋಧ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2023, 19:44 IST
Last Updated 26 ಸೆಪ್ಟೆಂಬರ್ 2023, 19:44 IST
ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ
ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ   

ಅರಸೀಕೆರೆ (ವಿಜಯನಗರ ಜಿಲ್ಲೆ): ‘ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಹೊಸ ಮದ್ಯದ ಅಂಗಡಿ ತೆರೆಯಲು ಪರವಾನಗಿ ನೀಡಬಾರದು’ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಒತ್ತಾಯಿಸಿದರು.

ಹರಪನಹಳ್ಳಿ ತಾಲ್ಲೂಕು ಅರಸೀಕೆರೆ ಹೋಬಳಿಯ ಕಮ್ಮತ್ತಹಳ್ಳಿ ಗ್ರಾಮದಲ್ಲಿ ಮಂಗಳವಾರ ಬಸವತತ್ವ ಸಮ್ಮೇಳನದಲ್ಲಿ ಮಾತನಾಡಿದ ಅವರು, ‘ಗ್ರಾಮೀಣ ಪ್ರದೇಶಗಳಲ್ಲಿ ಈಗಾಗಾಲೇ ಮದ್ಯದಿಂದ ಸಾವಿರಾರು ಕುಟುಂಬಗಳ ನೆಮ್ಮದಿ ಹಾಳಾಗಿದೆ. ಯುವಕರು ದಾರಿ ತಪ್ಪುತ್ತಿದ್ದಾರೆ. ಸರ್ಕಾರ ಕೂಡಲೇ ಪ್ರಸ್ತಾವ ಕೈಬಿಡಬೇಕು’ ಎಂದರು.

‘ಮದ್ಯದ ಅಂಗಡಿ ವಿರುದ್ಧ ಮಹಿಳೆಯರು ದಂಗೆ ಏಳಬೇಕು. ಸಾತ್ವಿಕ ಪುರುಷರೂ ಭಾಗಿಯಾಗಬೇಕು. ಸಮಾಜದಲ್ಲಿ ಪ್ರತಿಯೊಬ್ಬರೂ ಅನ್ಯಾಯ ವಿರೋಧಿಸುವ ಗುಣ ಬೆಳಸಿಕೊಳ್ಳಬೇಕು. ಇದರಲ್ಲಿ ಮಠಾಧೀಶರೂ ಹೊರತಾಗಿಲ್ಲ. ಆದರೆ, ಮಠದ ಭಕ್ತರನ್ನು ಕಳೆದುಕೊಳ್ಳುವ ಆತಂಕ ಮಠಾಧೀಶರಿಗೆ ಸಲ್ಲದು’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.