ADVERTISEMENT

ಶಾಲೆ ಕಾಂಪೌಂಡ್‌ ನಿರ್ಮಾಣಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 23 ಜೂನ್ 2021, 14:09 IST
Last Updated 23 ಜೂನ್ 2021, 14:09 IST
ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸುನಂದಾ ಅವರು ಬುಧವಾರ ಹೊಸಪೇಟೆಯ ಸರ್ಕಾರಿ ವಿನೋಬಾ ಭಾವೆ ಶಾಲೆಯ ಕಾಂಪೌಂಡ್‌ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು
ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸುನಂದಾ ಅವರು ಬುಧವಾರ ಹೊಸಪೇಟೆಯ ಸರ್ಕಾರಿ ವಿನೋಬಾ ಭಾವೆ ಶಾಲೆಯ ಕಾಂಪೌಂಡ್‌ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು   

ಹೊಸಪೇಟೆ (ವಿಜಯನಗರ): ಇನ್ನೆರಡು ವರ್ಷಗಳಲ್ಲಿ ಶತಮಾನೋತ್ಸವ ಆಚರಿಸಿಕೊಳ್ಳಲಿರುವ ಚಿತ್ತವಾಡ್ಗಿ ವಿನೋಬಾ ಭಾವೆ ಸರ್ಕಾರಿ ಶಾಲೆಯ ಕಾಂಪೌಂಡ್‌ ನಿರ್ಮಾಣ ಕಾಮಗಾರಿಗೆ ಬುಧವಾರ ಚಾಲನೆ ನೀಡಲಾಯಿತು.

ಜಿಲ್ಲಾ ಖನಿಜ ನಿಧಿಯಿಂದ ಬಿಡುಗಡೆಯಾದ ₹40 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕಾಮಗಾರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸುನಂದಾ ಚಾಲನೆ ನೀಡಿದರು.

‘1924ರಲ್ಲಿ ಆರಂಭವಾದ ಶಾಲೆ ಇನ್ನೆರಡು ವರ್ಷಗಳಲ್ಲಿ ಶತಮಾನೋತ್ಸವ ಆಚರಿಸಿಕೊಳ್ಳಲಿದೆ. ಕಾಂಪೌಂಡ್‌ ಸೇರಿದಂತೆ ಅಷ್ಟರೊಳಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಿ, ಮಾದರಿ ಶಾಲೆ ಮಾಡಲಾಗುವುದು. ಅದಕ್ಕೆ ಎಲ್ಲರ ಸಹಕಾರ ಅಗತ್ಯ’ ಎಂದು ಹೇಳಿದರು.

ADVERTISEMENT

ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಅಶೋಕ್ ಜೀರೆ, ಶಾಲೆಯ ಮುಖ್ಯಶಿಕ್ಷಕಿ ಸುಭಾಷಿಣಿ, ಮುಖಂಡರಾದ ಸಂದೀಪ್ ಸಿಂಗ್, ಕೆ.ಎಂ. ಸಂತೋಷ್ ಕುಮಾರ್‌, ಬಿಸಾಟಿ ಮಹೇಶ್, ಶಿವುಕುಮಾರ, ರತ್ನಮ್ಮ, ಮಧುಸೂದನ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.