ಹೊಸಪೇಟೆ : ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆ ಸುರಿಯುತ್ತಿದ್ದು, ಹರಪನಹಳ್ಳಿ, ಹೂವಿನಹಡಗಲಿ ಮತ್ತು ಕೂಡ್ಲಿಗಿ ತಾಲ್ಲೂಕುಗಳಲ್ಲಿ ಉತ್ತಮ ಮಳೆ ಸುರಿಯುತ್ತಿರುವುದರಿಂದ ಸುರಕ್ಷತೆ ದೃಷ್ಟಿಯಿಂದ ಮಂಗಳವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರು ಮಂಗಳವಾರ ಬೆಳಿಗ್ಗೆ ಆದೇಶ ಹೊರಡಿಸಿದ್ದು, ಈ ದಿನ ರಜೆಯಿಂದ ಬೋಧನೆಯ ಮೇಲೆ ಆಗುವ ನಷ್ಟವನ್ನು ಇದೇ 30ರಂದು ಶಾಲೆ ನಡೆಸುವ ಮೂಲಕ ಸರಿದೂಗಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ಡಿಡಿಪಿಐ ಜಿ.ಕೊಟ್ರೇಶ್ ಅವರು ಸಹ ಈ ಮೂರು ತಾಲ್ಲೂಕುಗಳ ಬಿಇಒಗಳಿಗೆ ಹಾಗೂ ಶಾಲಾ ಮುಖ್ಯ ಶಿಕ್ಷಕರಿಗೆ ರಜೆ ನೀಡುವ ಕುರಿತು ಸೂಚನೆ ನೀಡಿದ್ದಾರೆ.
ಹೊಸಪೇಟೆ ನಗರದಲ್ಲಿ ಮಂಗಳವಾರ ಬೆಳಿಗ್ಗೆಯಿಂದಲೇ ಜಿಟಿ ಜಿಟಿ ಮಳೆ ಸುರಿಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.