ADVERTISEMENT

ಗಾಂಜಾ ಮಾರಾಟ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2024, 15:42 IST
Last Updated 2 ಆಗಸ್ಟ್ 2024, 15:42 IST

ಹೂವಿನಹಡಗಲಿ: ಪಟ್ಟಣದ ಮದಲಗಟ್ಟಿ ವೃತ್ತದ ಬಳಿ ಗುರುವಾರ ರಾತ್ರಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಇಲ್ಲಿನ ಪೊಲೀಸರು ಬಂಧಿಸಿ, ₹40 ಸಾವಿರ ಮೌಲ್ಯದ 592 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಪಟ್ಟಣದ ಕಿರಣಕುಮಾರ್, ಕೊಟ್ಟೂರಿನ ಮಣಿಕಂಠ ಬಂಧಿತರು. ಸಿಪಿಐ ದೀಪಕ್ ಭೂಸರೆಡ್ಡಿ ಮಾರ್ಗದರ್ಶನದಲ್ಲಿ ಪಿಎಸ್ಐ ವಿಜಯಕೃಷ್ಣ ಹಾಗೂ ಸಿಬ್ಬಂದಿ ದಾಳಿ ನಡೆಸಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT