
ಪ್ರಜಾವಾಣಿ ವಾರ್ತೆ
ಪ್ರಾತಿನಿಧಿಕ ಪತ್ರ
ಹೊಸಪೇಟೆ: ರೇಷ್ಮೆ ಇಲಾಖೆಯಿಂದ 2023-24 ಮತ್ತು 2024-25ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಉತ್ತಮ ಪ್ರಗತಿ ಸಾಧಿಸಿದ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವ ರೇಷ್ಮೆ ಬೆಳೆಗಾರರು ಕನಿಷ್ಠ 1 ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕಾ ಮನೆ ಹೊಂದಿರಬೇಕು. 100 ಮೊಟ್ಟೆಗೆ ಸರಾಸರಿ ರೇಷ್ಮೆ ಗೂಡಿನ ಇಳುವರಿ 65 ಕೆ.ಜಿ, ಒಂದು ಎಕರೆಗೆ ರೇಷ್ಮೆ ಗೂಡಿನ ಉತ್ಪಾದನೆ 500 ಕೆ.ಜಿ.ಗಿಂತ ಕಡಿಮೆ ಇರಬಾರದು. ರೇಷ್ಮೆ ಬೆಳೆಗಾರರು ರೇಷ್ಮೆ ಪಾಸ್ ಬುಕ್, ರೇಷ್ಮೆ ಮೊಟ್ಟೆ ಖರೀದಿಸಿರುವ ಬಗ್ಗೆ ಹಾಗೂ ರೇಷ್ಮೆ ಗೂಡು ಮಾರಾಟ ಮಾಡಿರುವ ಬಗ್ಗೆ ದಾಖಲಾತಿಗಳೊಂದಿಗೆ ಅರ್ಹ ರೈತರು ಸ್ಥಳೀಯ ರೇಷ್ಮೆ ವಿಸ್ತರಣಾಧಿಕಾರಿಗಳು ಅಥವಾ ರೇಷ್ಮೆ ಸಹಾಯಕ ನಿರ್ದೇಶಕರ ಕಚೇರಿಗೆ ಫೆ.5ರ ಒಳಗಾಗಿ ಅರ್ಜಿ ಸಲ್ಲಿಸಬಹುದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.