ADVERTISEMENT

ವಿಜಯನಗರ | ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ: ಶಿಕ್ಷಕ ಬಂಧನ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2025, 0:19 IST
Last Updated 29 ಮಾರ್ಚ್ 2025, 0:19 IST
<div class="paragraphs"><p>ಬಂಧನ ( ಸಾಂಕೇತಿಕ ಚಿತ್ರ)</p></div>

ಬಂಧನ ( ಸಾಂಕೇತಿಕ ಚಿತ್ರ)

   

ಹೊಸಪೇಟೆ (ವಿಜಯನಗರ): ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೂಡ್ಲಿಗಿ ತಾಲ್ಲೂಕಿನ ಸರ್ಕಾರಿ ಶಾಲೆಯೊಂದರ ಶಿಕ್ಷಕ ಮಾರಪ್ಪ (45) ವಿರುದ್ಧ ಪೋಕ್ಸೊ ಕಾಯ್ದ ಅಡಿ ಪ್ರಕರಣ ದಾಖಲಿಸಿ, ಬಂಧಿಸಲಾಗಿದೆ.

‘ಎಸ್ಸೆಸ್ಸೆಲ್ಸಿ ಪರೀಕ್ಷೆಗೆಂದು ವಿದ್ಯಾರ್ಥಿನಿ ಶಾಲೆಗೆ ಹೋದಾಗ, ಆಕೆಯೊಂದಿಗೆ ಶಿಕ್ಷಕ ಅಸಭ್ಯ ರೀತಿಯಲ್ಲಿ ವರ್ತಿಸಿದ್ದ. ಜೀವ ಬೆದರಿಕೆ ಒಡ್ಡಿದ್ದ ಎಂದು ವಿದ್ಯಾರ್ಥಿನಿಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ’ ಎಂದು ‍‍ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.