ADVERTISEMENT

ಪದವಿ ವಿದ್ಯಾರ್ಥಿಗಳ ಬಡ್ತಿಗೆ ಎಸ್‌ಎಫ್ಐ ಆಗ್ರಹ

​ಪ್ರಜಾವಾಣಿ ವಾರ್ತೆ
Published 20 ಜುಲೈ 2021, 11:48 IST
Last Updated 20 ಜುಲೈ 2021, 11:48 IST
ಎಸ್‌ಎಫ್‌ಐ ಮುಖಂಡರು ಮಂಗಳವಾರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಪರೀಕ್ಷಾಂಗ ವಿಭಾಗದ ಕುಲಸಚಿವ ಶಶಿಕಾಂತ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು
ಎಸ್‌ಎಫ್‌ಐ ಮುಖಂಡರು ಮಂಗಳವಾರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಪರೀಕ್ಷಾಂಗ ವಿಭಾಗದ ಕುಲಸಚಿವ ಶಶಿಕಾಂತ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಹೊಸಪೇಟೆ (ವಿಜಯನಗರ): ಯುಜಿಸಿ ನಿಯಮದಂತೆ ಪದವಿ ಪರೀಕ್ಷೆಗಳನ್ನು ರದ್ದುಗೊಳಿಸಿ ವಿದ್ಯಾರ್ಥಿಗಳಿಗೆ ಬಡ್ತಿ ನೀಡಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್(ಎಸ್ಎಫ್ಐ) ಆಗ್ರಹಿಸಿದೆ.

ಮಂಗಳವಾರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಪರೀಕ್ಷಾಂಗ ವಿಭಾಗದ ಕುಲಸಚಿವ ಶಶಿಕಾಂತ್‌ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದರು.

ತುರ್ತು ಸಂದರ್ಭದಲ್ಲಿ ವಿದ್ಯಾರ್ಥಿಗಳಿಗಗ ಬಡ್ತಿ ನೀಡಿ ಪಾಸು ಮಾಡಬೇಕೆಂಬ ನಿಲುವನ್ನು ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ) ಹೊಂದಿದೆ. ಆದರೆ ಕೊರೊನಾ ಸೋಂಕು ಹರಡುವಿಕೆ ಸಂದರ್ಭದಲ್ಲಿ ಯಾವುದೇ ಹೇಳಿಕೆ ನೀಡದೇ ಸರ್ಕಾರ ಪರೀಕ್ಷೆ ರದ್ದುಗೊಳಿಸಿದೆ. ಈಗ ಎರಡು, ನಾಲ್ಕು ಮತ್ತು ಆರನೇ ಸೆಮಿಸ್ಟರ್‌ನ ಆಂತರಿಕ ಪರೀಕ್ಷೆಯನ್ನು ಆನ್‌ಲೈನ್‌ನಲ್ಲಿ ನಡೆಸಿದೆ. ಕುಲಪತಿಗಳು ಪರೀಕ್ಷೆ ನಡೆಸಲಾಗುವುದು ಎಂದು ಹೇಳಿರುವುದು ಸರಿಯಲ್ಲ. ಪೋಷಕರು, ವಿದ್ಯಾರ್ಥಿಗಳ ಜೊತೆಗೆ ವಿಶ್ವವಿದ್ಯಾಲಯ ಸಭೆ ನಡೆಸಿ ಮುಂದುವರೆಯಬೇಕು ಎಂದು ಒತ್ತಾಯಿಸಿದರು.

ADVERTISEMENT

ಎಸ್ಎಫ್ಐ ಜಿಲ್ಲಾ ಅಧ್ಯಕ್ಷ ಬಸವರಾಜು, ಕಾರ್ಯದರ್ಶಿ ಮಾರುತಿ ಎಚ್.ಎಂ, ಉಪಾಧ್ಯಕ್ಷ ಕೆ.ಎ. ಪವನ ಕುಮಾರ್, ಅಂಬರೀಷ್ ಇದ್ದರು‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.