ADVERTISEMENT

ಹೊಸಪೇಟೆ: ಶಾಹು ಮಹಾರಾಜ್‌ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 27 ಜೂನ್ 2021, 12:30 IST
Last Updated 27 ಜೂನ್ 2021, 12:30 IST
ಹೊಸಪೇಟೆಯಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹಂಪಿ ವಿಜಯನಗರ ಬುದ್ಧ ವಿಹಾರ ನಿರ್ಮಾಣ ಟ್ರಸ್ಟ್‌ ಅಧ್ಯಕ್ಷ ಪ್ರೊ. ಚಿನ್ನಸ್ವಾಮಿ ಸೋಸಲೆ, ಕಾರ್ಯದರ್ಶಿ ಸೋಮಶೇಖರ್‌ ಬಣ್ಣದಮನೆ ಅವರು ಶಾಹು ಮಹಾರಾಜರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು

ಹೊಸಪೇಟೆ (ವಿಜಯನಗರ): ಹಂಪಿ ವಿಜಯನಗರ ಬುದ್ಧ ವಿಹಾರ ನಿರ್ಮಾಣ ಟ್ರಸ್ಟ್‌ನಿಂದ ಭಾನುವಾರ ನಗರದಲ್ಲಿ ಛತ್ರಪತಿ ಶಾಹು ಮಹಾರಾಜ್‌ ಜಯಂತಿ ಆಚರಿಸಲಾಯಿತು.

ಟ್ರಸ್ಟ್‌ ಅಧ್ಯಕ್ಷ ಪ್ರೊ. ಚಿನ್ನಸ್ವಾಮಿ ಸೋಸಲೆ ಅವರು ಶಾಹು ಮಹಾರಾಜ್‌ರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ‘ಭಾರತದಲ್ಲಿ ಸಮ ಸಂಸ್ಕೃತಿಯ ಪ್ರತಿಪಾದನೆ ಮಾಡಿ ಪ್ರಜಾಪ್ರಭುತ್ವದ ಮಾದರಿಯಲ್ಲಿ ಅಧಿಕಾರ ನಡೆಸಿದವರು ಶಾಹು ಮಹಾರಾಜರು. ತಳಸಮುದಾಯದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಮೀಸಲಾತಿ ಜಾರಿಗೆ ತಂದರು’ ಎಂದು ಸ್ಮರಿಸಿದರು.

‘ಶಾಹು ಮಹಾರಾಜ್‌ ಅವರ ಕ್ರಾಂತಿಕಾರಕ ಹೆಜ್ಜೆಗಳಿಂದ ಡಾ.ಬಿ.ಆರ್‌. ಅಂಬೇಡ್ಕರ್‌ ಸೇರಿದಂತೆ ಅನೇಕ ಹಿಂದುಳಿದ ಸಮುದಾಯದವರು ಮೇಲೆ ಬರಲು ಸಾಧ್ಯವಾಯಿತು. ಹೀಗಾಗಿ ತಳಸಮುದಾಯದವರು ಸದಾ ಶಾಹು ಮಹಾರಾಜರನ್ನು ಸ್ಮರಿಸಬೇಕು’ ಎಂದು ತಿಳಿಸಿದರು. ಕಾರ್ಯದರ್ಶಿ ಸೋಮಶೇಖರ್‌ ಬಣ್ಣದಮನೆ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.