
ಪ್ರಜಾವಾಣಿ ವಾರ್ತೆ
ಹಗರಿಬೊಮ್ಮನಹಳ್ಳಿ: ವಿದ್ಯುತ್ ಶಾರ್ಟ್ಸರ್ಕಿಟ್‌ನಿಂದಾಗಿ ಕಿರಾಣಿ ಅಂಗಡಿಯಲ್ಲಿದ್ದ ಎಲ್ಲಾ ದಾಸ್ತಾನು ಸುಟ್ಟು ಭಸ್ಮವಾದ ಘಟನೆ ಪಟ್ಟಣದಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ.
ಪಟ್ಟಣದ ಪೊಲೀಸ್ ಠಾಣೆ ಬಳಿ ಇರುವ ಗಂಗಾಧರ ಗೌಡ ಎನ್ನುವವರಿಗೆ ಸೇರಿದ ಕಿರಾಣಿ ಅಂಗಡಿಯಲ್ಲಿ ರಾತ್ರಿ 1.30ರ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ, ಆಗ ಅಂಗಡಿಗೆಲ್ಲಾ ಬೆಂಕಿ ಹತ್ತಿಕೊಂಡು ಉರಿದಿದೆ, ಎಲ್ಲ ದಿನಸಿಗಳು ಸುಟ್ಟು ಕರಕಲಾಗಿವೆ ಎಂದು ಪೊಲೀಸರು ತುಳಿಸಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು. ಇದರಿಂದಾಗಿ ಅಂದಾಜು ₹15 ಲಕ್ಷ ನಷ್ಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.