ಹೊಸಪೇಟೆ (ವಿಜಯನಗರ): ಅವಳಿ ಜಿಲ್ಲೆಗಳಾದ ವಿಜಯನಗರ–ಬಳ್ಳಾರಿಯಲ್ಲಿ ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೊದಲ ಪತ್ರಿಕೆಗೆ 562 ವಿದ್ಯಾರ್ಥಿಗಳು ಗೈರು ಹಾಜರಾದರು.
ಪರೀಕ್ಷೆಗೆ ಒಟ್ಟು 2,554 ವಿದ್ಯಾರ್ಥಿಗಳು ಹೆಸರು ನೋಂದಣಿ ಮಾಡಿಸಿದ್ದರು. ಈ ಪೈಕಿ 1,992 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಮೊದಲ ದಿನ ವಿಜ್ಞಾನ ವಿಷಯದ ಪರೀಕ್ಷೆ ನಡೆಯಿತು. ಅವಳಿ ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.