ADVERTISEMENT

ಹೊಸಪೇಟೆ: ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗೆ ಶೇ 76.9 ವಿದ್ಯಾರ್ಥಿಗಳು ಹಾಜರ್‌

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2021, 13:56 IST
Last Updated 27 ಸೆಪ್ಟೆಂಬರ್ 2021, 13:56 IST
ಹೊಸಪೇಟೆಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳಿಗೆ ಆಶಾ ಕಾರ್ಯಕರ್ತೆ ಥರ್ಮಲ್‌ ಸ್ಕ್ರೀನಿಂಗ್‌ ನಡೆಸಿದರು
ಹೊಸಪೇಟೆಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳಿಗೆ ಆಶಾ ಕಾರ್ಯಕರ್ತೆ ಥರ್ಮಲ್‌ ಸ್ಕ್ರೀನಿಂಗ್‌ ನಡೆಸಿದರು   

ಹೊಸಪೇಟೆ(ವಿಜಯನಗರ): ಸೋಮವಾರ ನಗರದಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ ಮೊದಲ ದಿನ ಶೇ 76.9ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು.

ಮೊದಲ ದಿನ ಗಣಿತ, ವಿಜ್ಞಾನ ಮತ್ತು ಸಮಾಜ ವಿಷಯಗಳ ಪರೀಕ್ಷೆಗೆ ನೊಂದಾಯಿಸಿದ್ದ 665 ವಿದ್ಯಾರ್ಥಿಗಳ ಪೈಕಿ 512 ವಿದ್ಯಾರ್ಥಿಗಳು ಹಾಜರಾಗಿದ್ದರು. 153 ವಿದ್ಯಾರ್ಥಿಗಳು ಗೈರಾಗಿದ್ದರು. ಪರೀಕ್ಷೆ ಆರಂಭಕ್ಕೂ ಮುನ್ನಾ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ನಡೆಸಿ, ಸ್ಯಾನಿಟೈಸರ್ ನೀಡಿ ಕೊಠಡಿಗೆ ಕಳಿಸಲಾಯಿತು.

ಪೂರಕ ಪರೀಕ್ಷೆಗೆ 430 ರೆಗ್ಯುಲರ್ ವಿದ್ಯಾರ್ಥಿಗಳು ಮತ್ತು 235 ಪುನರಾವರ್ತಿತ ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದರು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಸುನಂದಾ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.