ADVERTISEMENT

ಏ.12ರಂದು ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2025, 14:03 IST
Last Updated 5 ಏಪ್ರಿಲ್ 2025, 14:03 IST

ಕುರುಗೋಡು: ತಾಲ್ಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆ ಸಹಯೋಗದಲ್ಲಿ ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಏ.12ರಂದು ಪಟ್ಟಣದ ಎಸ್.ಎಲ್.ವಿ. ಫಂಕ್ಷನ್ ಹಾಲ್‌ನಲ್ಲಿ ‘ಬಿ.ಆರ್. ಅಂಬೇಡ್ಕರ್ ಬದುಕು- ಬರಹ’ ಕುರಿತು ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆ ಆಯೋಸಲಾಗಿದೆ.

ಯಾವುದೇ ವಯೋಮಾನದವರು ಭಾಗವಹಿಸಬಹುದು. ಪ್ರವೇಶ ಶುಲ್ಕವಿಲ್ಲ. ಪ್ರಥಮ ಬಹುಮಾನ ₹25 ಸಾವಿರ, ದ್ವಿತೀಯ ಬಹುಮಾನ ₹15 ಸಾವಿರ ಹಾಗೂ ತೃತೀಯ ಬಹುಮಾನ ₹10 ಸಾವಿರ ಇರಲಿದೆ. ಭಾಗವಹಿಸಿದ ಎಲ್ಲರಿಗೂ ಅಭಿನಂದನಾ ಪತ್ರ ನೀಡಲಾಗುವುದು.

ಹೆಚ್ಚಿನ ಮಾಹಿತಿಗೆ 99644 07145, 74060 88105 ಸಂಪರ್ಕಿಸಬಹುದು ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.