ADVERTISEMENT

ಹೂವಿನಹಡಗಲಿ: 7 ಸರ್ಕಾರಿ ಹುದ್ದೆಗೆ ಆಯ್ಕೆಯಾದ ಪ್ರತಿಭಾವಂತ ವಿದ್ಯಾರ್ಥಿ ಮಂಜುನಾಥ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2026, 1:58 IST
Last Updated 19 ಫೆಬ್ರುವರಿ 2026, 1:58 IST
ಮಂಜುನಾಥ
ಮಂಜುನಾಥ   

ಹೂವಿನಹಡಗಲಿ: ಪಟ್ಟಣದ ಪ್ರತಿಭಾವಂತ ವಿದ್ಯಾರ್ಥಿ ಮಠದ ಮಂಜುನಾಥ ಅವರು ಏಕ ಕಾಲಕ್ಕೆ ಏಳು ಸರ್ಕಾರಿ ಹುದ್ದೆಗಳಿಗೆ ಆಯ್ಕೆಯಾಗಿ ಗಮನ ಸೆಳೆದಿದ್ದಾರೆ.

ಪಟ್ಟಣದ 9ನೇ ವಾರ್ಡ್ ಬನಶಂಕರಿ ಬಡಾವಣೆಯ ನಿವಾಸಿ, ಗುಜನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ, ಮಾಗಳ ಗ್ರಾಮದವರಾದ ಮಠದ ವೀರಣ್ಣ, ಶಾರದಾ ದಂಪತಿಯ ಪುತ್ರ ಮಂಜುನಾಥ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ಬಿಎಸ್ಸಿ (ತೋಟಗಾರಿಕೆ) ಪದವಿ ಪಡೆದಿರುವ ಅವರು, ಕೆಪಿಟಿಸಿಎಲ್‌ನಲ್ಲಿ ಎಫ್‌ಡಿಎ, ಕಾರ್ಮಿಕ ಇಲಾಖೆ, ಆಹಾರ ಇಲಾಖೆಯಲ್ಲಿ ಎಸ್‌ಡಿಎ, ಚಾಮರಾಜನಗರ ಜಿಲ್ಲೆಯಲ್ಲಿ ಗ್ರಾಮ ಆಡಳಿತಾಧಿಕಾರಿ, ಪಿಡಿಒ, ವಾಣಿಜ್ಯ ತೆರಿಗೆ ಇಲಾಖೆ ಪರಿವೀಕ್ಷಕ ಹುದ್ದೆಗೆ ಆಯ್ಕೆಯಾಗಿ ಉದ್ಯೋಗ ಆಕಾಂಕ್ಷಿಗಳಿಗೆ ಪ್ರೇರಣೆಯಾಗಿದ್ದಾರೆ.

ADVERTISEMENT

ಸದ್ಯ ವಾಣಿಜ್ಯ ತೆರಿಗೆ ಪರಿವೀಕ್ಷಕ ಹುದ್ದೆಗೆ ಸೇರಿ ಬೆಂಗಳೂರಿನಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಕೆಎಎಸ್ ಪೂರ್ವಭಾವಿ ಪರೀಕ್ಷೆ ಉತ್ತೀರ್ಣರಾಗಿ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.