ADVERTISEMENT

ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2022, 9:34 IST
Last Updated 8 ಫೆಬ್ರುವರಿ 2022, 9:34 IST

ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಮಂಗಳವಾರ ಮೂವರು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿಕೊಂಡು ಬಂದಿದ್ದರು.

ವಿದ್ಯಾರ್ಥಿಗಳನ್ನು ಗಮನಿಸಿದ ಪ್ರಾಂಶುಪಾಲ ಪ್ರೊ.ಸತೀಶ್ ಪಾಟೀಲ್, ‘ಕಾಲೇಜಿನಲ್ಲಿ ಶಿಸ್ತು ಕಾಪಾಡಿಕೊಳ್ಳಬೇಕು’ ಎಂದು ತಿಳಿ ಹೇಳಿದರು.

ಅದಕ್ಕೆ ವಿದ್ಯಾರ್ಥಿಗಳು, ‘ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಬಂದಿದ್ದಾರೆ. ಅವರಿಗೂ ತಿಳಿ ಹೇಳಬೇಕು’ ಎಂದು ಹೇಳಿ ಅಲ್ಲಿಂದ ನಿರ್ಗಮಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.