ADVERTISEMENT

ವಿಜಯನಗರ | ‘ಸುಜಲಂ’ ಜಲತತ್ವ ರಾಷ್ಟ್ರೀಯ ವಿಚಾರ ಸಂಕಿರಣ ಅ. 29ರಿಂದ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2022, 11:02 IST
Last Updated 28 ಅಕ್ಟೋಬರ್ 2022, 11:02 IST
ಪ್ರೊ.ಸ.ಚಿ. ರಮೇಶ, ಕುಲಪತಿ, ಹಂಪಿ ಕನ್ನಡ ವಿಶ್ವವಿದ್ಯಾಲಯ
ಪ್ರೊ.ಸ.ಚಿ. ರಮೇಶ, ಕುಲಪತಿ, ಹಂಪಿ ಕನ್ನಡ ವಿಶ್ವವಿದ್ಯಾಲಯ   

ಹೊಸಪೇಟೆ (ವಿಜಯನಗರ): ‘ಸುಜಲಂ’ ಜಲತತ್ವ ರಾಷ್ಟ್ರೀಯ ವಿಚಾರ ಸಂಕಿರಣ ಶನಿವಾರದಿಂದ (ಅ.29) ಮೂರು ದಿನಗಳ ವರೆಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ ಎಂದು ವಿ.ವಿ. ಕುಲಪತಿ ಪ್ರೊ.ಸ.ಚಿ. ರಮೇಶ ತಿಳಿಸಿದರು.

ಶನಿವಾರ ಬೆಳಿಗ್ಗೆ 10ಕ್ಕೆ ಪರಿಸರವಾದಿ ತುಳಸೀಗೌಡ ಉದ್ಘಾಟಿಸುವರು. ಕೇಂದ್ರ ವಿದೇಶಾಂಗ ಹಾಗೂ ಸಂಸ್ಕೃತಿ ಖಾತೆ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಸಂಜೆ 6ಕ್ಕೆ ವಿ.ವಿ. ಆವರಣದ ಅಳ್ಳಿಕೆರೆಯಲ್ಲಿ ತುಂಗಭದ್ರಾ ಆರತಿ ಕಾರ್ಯಕ್ರಮ ನಡೆಯಲಿದೆ. ಅ. 30ರಂದು ಸಂಜೆ 4.15ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭಕ್ಕೆ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಆಗಮಿಸುವರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು.

ನವದೆಹಲಿಯ ದೀನ್‌ ದಯಾಳ್‌ ಸಂಶೋಧನಾ ಸಂಸ್ಥೆ, ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ದೇಶದ ಹೆಸರಾಂತ ಜಲತಜ್ಞರು ಭಾಗವಹಿಸುವರು. ಎಲ್ಲ ಗೋಷ್ಠಿಗಳು, ಚರ್ಚೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಜಲದ ಕುರಿತಾಗಿಯೇ ಇರಲಿವೆ ಎಂದು ವಿವರಿಸಿದರು.

ADVERTISEMENT

ಕುಲಸಚಿವ ಪ್ರೊ.ಎ. ಸುಬ್ಬಣ್ಣ ರೈ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.