ಹರಪನಹಳ್ಳಿ: ಸಮೀಕ್ಷೆಯಿಂದ ಹೊರಗುಳಿದ ಮಹಿಳೆಯರು ಮತ್ತು ಅವಲಂಬಿತ ಕುಟುಂಬ ಸದಸ್ಯರನ್ನು ದೇವದಾಸಿ ಸಮೀಕ್ಷಾ ಪಟ್ಟಿಗೆ ಸೇರಿಸಬೇಕು ಎಂದು ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ, ದೇವದಾಸಿ ಮಹಿಳೆಯರ ಮಕ್ಕಳ ಹೋರಾಟ ಸಮಿತಿ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ಬಳಿಕ ತಾಲ್ಲೂಕು ಆಡಳಿತ ಸೌಧಕ್ಕೆ ತೆರಳಿ ತಹಶೀಲ್ದಾರ ಬಿ.ವಿ.ಗಿರೀಶ್ ಬಾಬು ಅವರಿಗೆ ಮನವಿ ಸಲ್ಲಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಕಚೇರಿ ಆವರಣದಲ್ಲಿ ಜಮಾಯಿಸಿದ ಕಾರ್ಯಕರ್ತರು, ದೇವದಾಸಿ ಮಹಿಳೆಯರಿಗೆ ವಯಸ್ಸಿನ ಮಿತಿಯಿಲ್ಲದೇ ಸಮೀಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಘಟಕದ ಅಧ್ಯಕ್ಷೆ ಟಿ.ವಿ.ರೇಣುಕಮ್ಮ ಮಾತನಾಡಿ, ತಾಲ್ಲೂಕಿಗೊಬ್ಬ ಯೋಜನೆ ಅನುಷ್ಠಾನಾಧಿಕಾರಿ ನೇಮಿಸಬೇಕು. ಸಮೀಕ್ಷೆಗೆ ವಿಧಿಸಿರುವ ವಯಸ್ಸಿನ ಮಿತಿ ತೆಗೆದು ಹಾಕಬೇಕು. ಮಾಸಿಕ ಸಹಾಯಧನ ₹ 3 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ತಾಲ್ಲೂಕು ಅಧ್ಯಕ್ಷೆ ಈರಮ್ಮ, ಮುಖಂಡರಾದ ಹುಲಿಕಟ್ಟೆ ರಹಮತ್ ವುಲ್ಲಾ, ಹನುಮಕ್ಕ, ಮುತ್ತಮ್ಮ, ಗಂಗಮ್ಮ, ಕವಿತಾ, ಮೈಲಮ್ಮ, ಕೆಂಚಮ್ಮ, ಗೌರಮ್ಮ, ರೇಣುಕಮ್ಮ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.