
ಪ್ರಜಾವಾಣಿ ವಾರ್ತೆಹೊಸಪೇಟೆ (ವಿಜಯನಗರ): ತುಂಗಭದ್ರಾ ಅಣೆಕಟ್ಟೆಯ 18ನೇ ಗೇಟ್‌ನಲ್ಲಿ ಹೊಸ ಕ್ರೆಸ್ಟ್‌ಗೇಟ್ ಅಳವಡಿಕೆ ಕಾರ್ಯ ಆರಂಭವಾಗಿ ಒಂಬತ್ತು ದಿನಗಳಾದರೂ ಅದು ಅಂತಿಮ ಹಂತಕ್ಕೆ ಬಂದಿಲ್ಲ.
ಡಿ. 24ರಂದು ಪ್ರಕ್ರಿಯೆ ಆರಂಭವಾಗಿತ್ತು. 31ರಂದು ತುಂಗಭದ್ರಾ ಮಂಡಳಿ ಅಧ್ಯಕ್ಷ ಎಸ್.ಎನ್.ಪಾಂಡೆ ಭೇಟಿ ನೀಡಿ ಪರಿಶೀಲಿಸಿದ್ದರು. ಗೇಟ್ ತಜ್ಞ ಕನ್ನಯ್ಯನಾಯ್ಡು ಶೀಘ್ರವೇ ಇಲ್ಲಿಗೆ ಭೇಟಿ ನೀಡುವ ಸಾಧ್ಯತೆ ಇದೆ.
‘ಶನಿವಾರ ಸಂಜೆಯೊಳಗೆ 18ನೇ ಗೇಟ್‌ನ ಅಳವಡಿಕೆ ಬಹುತೇಕ ಪೂರ್ಣಗೊಳ್ಳಬಹುದು. ಬಳಿಕ 27ನೇ ಗೇಟ್ ಅಳವಡಿಕೆ ಕಾರ್ಯ ಆರಂಭವಾಗಲಿದೆ’ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.