ADVERTISEMENT

ಮುಖ್ಯಮಂತ್ರಿಗೆ ಮುಜುಗರ ಆಗುವ ರೀತಿಯಲ್ಲಿ ಹೇಳಿಕೆ ಕೊಡಲಾರೆ: ಸಚಿವ ಆನಂದ್‌ ಸಿಂಗ್‌

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2021, 6:29 IST
Last Updated 9 ಆಗಸ್ಟ್ 2021, 6:29 IST
ಸಚಿವ ಆನಂದ್‌ ಸಿಂಗ್‌
ಸಚಿವ ಆನಂದ್‌ ಸಿಂಗ್‌   

ಹೊಸಪೇಟೆ (ವಿಜಯನಗರ): ‘ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಪದೇ ಪದೇ ಮಾಧ್ಯಮಗಳ ಎದುರು ಬಂದು ರಾಜ್ಯದ ಮುಖ್ಯಮಂತ್ರಿಯವರಿಗೆ ಮುಜುಗರ ಆಗುವ ರೀತಿಯಲ್ಲಿ ಹೇಳಿಕೆ ಕೊಡಲಾರೆ’ ಎಂದು ಸಚಿವ ಆನಂದ್‌ ಸಿಂಗ್‌ ಪ್ರತಿಕ್ರಿಯಿಸಿದರು.

ಶ್ರಾವಣ ಮಾಸದ ಮೊದಲ ಸೋಮವಾರದ ನಿಮಿತ್ತ ನಗರದ ವೇಣುಗೋಪಾಲ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದ ನಂತರ ಸುದ್ದಿಗಾರರ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯಿಸಿದರು.

‘ನಾನು ಏನು ಹೇಳಬೇಕಿತ್ತೋ ಅದನ್ನು ನಿನ್ನೆಯೇ ಮುಖ್ಯಮಂತ್ರಿಯವರಿಗೆ ಹೇಳಿದ್ದೇನೆ. ನಾನು ಏನು ಹೇಳಿದ್ದೇನೆ ಎನ್ನುವುದು ಮುಖ್ಯಮಂತ್ರಿಯವರಿಗೆ ಗೊತ್ತು. ಅವರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಿದ್ದೇನೆ. ಅವರ ನಿರ್ಧಾರದ ನಿರೀಕ್ಷೆಯಲ್ಲಿದ್ದೇನೆ’ ಎಂದು ತಿಳಿಸಿದರು.

ADVERTISEMENT

‘ವೇಣುಗೋಪಾಲ ದೇವಸ್ಥಾನ ಜೀರ್ಣೊದ್ಧಾರ ಮಾಡಬೇಕು ಎನ್ನುವುದು ನಮ್ಮ ತಂದೆಯವರ ಮಹದಾಸೆ ಆಗಿತ್ತು. ಅದರ ಅಭಿವೃದ್ಧಿ ಕಾರ್ಯ ನಡೆಯುತ್ತಿರುವಾಗಲೇ ನಮ್ಮ ತಂದೆ ಅಕಾಲಿಕವಾಗಿ ನಿಧನರಾದರು. ಅವರು ಅಂದುಕೊಂಡಂತೆ ಇದನ್ನು ಅಭಿವೃದ್ಧಿಪಡಿಸಲಾಗುವುದು. ಮೂರು ದಿನ ನಿರಂತರವಾಗಿ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಗಳು ಜರುಗಲಿವೆ. ಆ. 11ರಂದು ನವಗ್ರಹ, ವೆಂಕಟರಮಣ, ರಾಮ– ಲಕ್ಷ್ಮಣ, ಸೀತೆ ಕಾರ್ತಿಕ, ಶಿವ, ಪಾರ್ವತಿ ವಿಗ್ರಹ ಪ್ರತಿಷ್ಠಾಪಿಸಲಾಗುವುದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.