ADVERTISEMENT

ಪ್ರಜಾವಾಣಿ ವರದಿ ಫಲಶ್ರುತಿ: ಪರೀಕ್ಷಾ ಕೇಂದ್ರಕ್ಕೆ ಬಂತು ಬೆಳಕು

​ಪ್ರಜಾವಾಣಿ ವಾರ್ತೆ
Published 22 ಜುಲೈ 2021, 6:58 IST
Last Updated 22 ಜುಲೈ 2021, 6:58 IST
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಿರುವ ವಿದ್ಯಾರ್ಥಿಗಳು
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಿರುವ ವಿದ್ಯಾರ್ಥಿಗಳು    

ಕೂಡ್ಲಿಗಿ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಕೊನೆಗೂ ಬೆಳಕು ಹರಿದಿದೆ.

ಪರೀಕ್ಷಾ ಕೇಂದ್ರದ ಕೊಠಡಿಗಳಲ್ಲಿ ವಿದ್ಯುತ್‌ ದೀಪಗಳ ವ್ಯವಸ್ಥೆ ಮಾಡಲಾಗಿದ್ದು, ವಿದ್ಯಾರ್ಥಿಗಳು ಬೆಳಕಿನಲ್ಲಿ ಬುಧವಾರ ಪರೀಕ್ಷೆ ಬರೆದರು.
ಸೋಮವಾರ ನಡೆದ ಪರೀಕ್ಷೆ ಸಂದರ್ಭದಲ್ಲಿ ವಿದ್ಯುತ್‌ ದೀಪಗಳ ವ್ಯವಸ್ಥೆ ಇರಲಿಲ್ಲ. ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿತ್ತು. ವಿಷಯದ ತಿಳಿದು ಶಾಸಕ ಗೋಪಾಲಕೃಷ್ಣ ಅವರು ಕೇಂದ್ರಕ್ಕೆ ಭೇಟಿ ನೀಡಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

‘ಬೆಳಕಿನ ಅಭಾವದಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು’ ಶೀರ್ಷಿಕೆಯಡಿ ಪ್ರಜಾವಾಣಿ ವರದಿ ಪ್ರಕಟಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT