ADVERTISEMENT

ಅರಸೀಕೆರೆ|‘ಕ್ಷೇತ್ರದ ಅಭಿವೃದ್ಧಿಗೆ ಜನಪ್ರತಿನಿಧಿ, ಅಧಿಕಾರಿಗಳ ಇಚ್ಛಾಶಕ್ತಿ ಅಗತ್ಯ’

​ಪ್ರಜಾವಾಣಿ ವಾರ್ತೆ
Published 4 ಜೂನ್ 2023, 16:11 IST
Last Updated 4 ಜೂನ್ 2023, 16:11 IST
ಅರಸೀಕೆರೆ ಗ್ರಾಮದ ಕೋಲಶಾಂತೇಶ್ವರ ಮಠಕ್ಕೆ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಭೇಟಿ ನೀಡಿ ಶಾಂತಲಿಂಗ ದೇಶಿಕೇಂದ್ರ ಸ್ವಾಮೀಜಿ ಅವರಿಗೆ ಕೃತಜ್ಞತೆ ಸಲ್ಲಿಸಿದರು
ಅರಸೀಕೆರೆ ಗ್ರಾಮದ ಕೋಲಶಾಂತೇಶ್ವರ ಮಠಕ್ಕೆ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಭೇಟಿ ನೀಡಿ ಶಾಂತಲಿಂಗ ದೇಶಿಕೇಂದ್ರ ಸ್ವಾಮೀಜಿ ಅವರಿಗೆ ಕೃತಜ್ಞತೆ ಸಲ್ಲಿಸಿದರು   

ಅರಸೀಕೆರೆ: ಜನಪ್ರತಿನಿಧಿಗಳಿಗೆ ಸಿಕ್ಕಿರುವ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡಾಗ ಕ್ಷೇತ್ರದ ಅಭಿವೃದ್ಧಿ ಸಾಧ್ಯ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಹೇಳಿದರು.

ಗ್ರಾಮದ ಕೋಲಶಾಂತೇಶ್ವರ ಮಠದ ಶಾಂತಲಿಂಗ ದೇಶಿಕೇಂದ್ರ ಸ್ವಾಮೀಜಿ ಅವರಿಗೆ ಕೃತಜ್ಞತೆ ಸಲ್ಲಿಸಿ ಅವರು ಮಾತನಾಡಿದರು.

‘ಚುನಾಯಿತ ಪ್ರತಿನಿಧಿ ಹಾಗೂ ಅಧಿಕಾರಗಳಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆ ತಲುಪಿಸುವ ಇಚ್ಛಾಶಕ್ತಿಯೊಂದಿದ್ದರೆ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹೊಂದುವುದರಲ್ಲಿ ಅನುಮಾನವೇ ಇಲ್ಲ’ ಎಂದರು.

ADVERTISEMENT

ಶಾಂತಲಿಂಗ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ‘ಅರಸೀಕೆರೆ ಹರಪನಹಳ್ಳಿ ಕ್ಷೇತ್ರದಿಂದ ಬೇರ್ಪಟ್ಟಿದ್ದರೂ ಮಾಜಿ ಉಪಮುಖ್ಯಮಂತ್ರಿ ಎಂ.ಪಿ. ಪ್ರಕಾಶ್, ಎಂ.ಪಿ. ರವೀಂದ್ರ ಅವರು ಅಭಿವೃದ್ಧಿಯ ಬೆಳಕು ಚೆಲ್ಲಿದ್ದರು. ಆ ಪ್ರತೀತಿಯನ್ನು ಎಂ.ಪಿ. ಲತಾ ಮುಂದುವರಿಸಿಕೊಂಡು ಜನರ ಸಂಕಷ್ಟಕ್ಕೆ ಸ್ಪಂದಿಸಿ ಕ್ಷೇತ್ರದ ಅಭಿವೃದ್ಧಿ ಮಾಡಲಿ’ ಎಂದರು.

ಕೆ.ಎಂ. ಶಿವಕುಮಾರ್ ಸ್ವಾಮಿ, ಪರಶುರಾಮಪ್ಪ, ಅಂಜಿನಪ್ಪ, ವಿಜಯಲಕ್ಷ್ಮೀ, ಭಾಗ್ಯಮ್ಮ, ಚಿಕ್ಕೇರಿ ಬಸಣ್ಣ, ನಾಗರಾಜ್, ಬಿ.ರಾಮಣ್ಣ, ಸಲಾಂ ಸಾಬ್, ಮಹಾಂತೇಶ್, ಚಂದ್ರಪ್ಪ, ಪೂಜಾರ್ ಮರಿಯಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.