ಪ್ರಾತಿನಿಧಿಕ ಚಿತ್ರ
ಹೊಸಪೇಟೆ: ಕಮಲಾಪುರದಲ್ಲಿನ ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್ ಮೃಗಾಲಯದಲ್ಲಿನ ‘ಸಿಂಧು’ ಹೆಸರಿನ ಹೆಣ್ಣು ಹುಲಿ ವಯೋಸಹಜ ಕಾಯಿಲೆಯಿಂದ ಶನಿವಾರ ಸತ್ತಿದೆ. ಈ ಹುಲಿಗೆ ಅಂದಾಜು 17 ರಿಂದ 18 ವರ್ಷ ವಯಸ್ಸಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ವಯೋಸಹಜವಾಗಿ ಮೃತಪಟ್ಟಿದೆ ಎಂದು ಉಪಸಂರಕ್ಷಣಾಧಿಕಾರಿ ಹಾಗೂ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಶ್ ನಾಯ್ಕ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.