ತೊಗರಿ
ಹೊಸಪೇಟೆ: ಬೆಂಬಲ ಬೆಲೆ ಯೋಜನೆಯಡಿ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಎಫ್‌ಎಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆ ಪ್ರತಿ ಕ್ವಿಂಟಲ್‌ಗೆ ₹8,000ರಂತೆ ರೈತರಿಂದ ಖರೀದಿಗಾಗಿ ಖರೀದಿ ಕೇಂದ್ರವನ್ನು ಆರಂಭಿಸಲಾಗಿದೆ ಎಂದು ಬಳ್ಳಾರಿ ಕೃಷಿ ಮಾರಾಟ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ವಿಜಯನಗರ ಶಾಖೆಯಿಂದ ಜಿಲ್ಲೆಯಲ್ಲಿ ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ಕಚೇರಿ ಹರಪನಹಳ್ಳಿಯಲ್ಲಿ, ಮೊ.9686709600 ಖರೀದಿ ಕೇಂದ್ರ ತೆರೆಯಲಗಿದೆ. ಜತೆಗೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ನಿ. ಕಚೇರಿ ಮರಿಯಮ್ಮನಹಳ್ಳಿ, ಹಗರಿಬೊಮ್ಮನಹಳ್ಳಿ ಮೊ.6743453271, ಹೂವಿನಹಡಗಲಿ ಮೊ. 7259822170 ಮತ್ತು ಕೂಡ್ಲಿಗಿಯ ತುಂಗಭದ್ರಾ ಗ್ರೌಂಡ್ ನಟ್ ಫಾರ್ಮರ್ಸ್ ಪ್ರೂಡ್ಯೂಸರ್ ಕಂಪನಿ ಮೊ.6363144145 ಇಲ್ಲಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಲಾಗಿದೆ.
ಜಿಲ್ಲೆಯ ರೈತರು ಬೆಂಬಲ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಯಾವುದೇ ರೈತರು ಮಧ್ಯವರ್ತಿಗಳ ಮೊರೆ ಹೋಗದಂತೆ ನೇರವಾಗಿ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಹೇಳಿದ್ದಾರೆ.
ರೈತರಲ್ಲಿ ಪ್ರೂಟ್ಸ್ ಐಡಿ ಇಲ್ಲದೇ ಇದ್ದಲ್ಲಿ ಪ್ರೂಟ್ಸ್ಸ್‌ನಲ್ಲಿ ಯಾವುದಾದರೂ ತಾಂತ್ರಿಕ ದೋಷವಿದ್ದಲ್ಲಿ ರೈತರು ಕೃಷಿ ಇಲಾಖೆಯನ್ನು ಸಂಪರ್ಕಿಸಿ ಅವಶ್ಯಕ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.