ADVERTISEMENT

ಮೊಬೈಲ್ ಕ್ಯಾಂಟಿನ್ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2026, 7:49 IST
Last Updated 27 ಫೆಬ್ರುವರಿ 2026, 7:49 IST
   

ಹೊಸಪೇಟೆ: ಪ್ರವಾಸೋದ್ಯಮ ಇಲಾಖೆಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮದಾರರನ್ನು ಉತ್ತೇಜಿಸಲು 1 ತಿಂಗಳ ಉದ್ಯಮಶೀಲತೆ ತರಬೇತಿ ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ನಡೆಸಲು ಸಹಾಯಧನ ನೀಡಲಾಗುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇಲಾಖೆ ವತಿಯಿಂದ ಮೊಬೈಲ್ ಕ್ಯಾಂಟಿನ್ ವಾಹನ ಖರೀದಿಸಲು ಇಲಾಖೆಯ ಸಹಾಯಧನ ಘಟಕ ವೆಚ್ಚದಲ್ಲಿ ಶೇ 70ರಷ್ಟು ಹಾಗೂ ಗರಿಷ್ಠ ₹5ಲಕ್ಷ ನೀಡಲಾಗುವುದು. ಮಾಹಿತಿಗಾಗಿ ಮೊ: 78927 22443 ಸಂಪರ್ಕಿಸಬಹುದು ಎಂದು  ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT