ಹೂವಿನಹಡಗಲಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಕಾದು ನಿಂತಿರುವ ಬಸ್ ಗಳು.
ಹೂವಿನಹಡಗಲಿ: ರಾಜ್ಯ ಸಾರಿಗೆ ನಿಗಮಗಳ ನೌಕರರ ಸಂಘಟನೆ ಮಂಗಳವಾರ ಕರೆ ನೀಡಿದ್ದ ಮುಷ್ಕರಕ್ಕೆ ಇಲ್ಲಿನ ಸಾರಿಗೆ ಘಟಕದ ಸಿಬ್ಬಂದಿ ಬೆಂಬಲಿದೇ ಎಲ್ಲರೂ ಕರ್ತ್ಯಕ್ಕೆ ಹಾಜರಾದರು.
ಘಟಕದ ಅಧಿಕಾರಿಗಳು ಬೆಳಿಗ್ಗೆಯೇ ಕಾರ್ಯಪ್ರವೃತ್ತರಾಗಿ ಚಾಲಕ, ನಿರ್ವಾಹಕ ಮತ್ತು ಸಿಬ್ಬಂದಿಗಳ ಮನೆಗೆ ತೆರಳಿದರು. ಅಧಿಕಾರಿಗಳ ಮನವಿಗೆ ಸ್ಪಂದಿಸಿದ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾದರು. ಸಾರಿಗೆ ಘಟಕದ 53 ಮಾರ್ಗಗಳ ಪೈಕಿ ತಾಂತ್ರಿಕ ಕಾರಣದಿಂದ ಒಂದು ಮಾರ್ಗ ಹೊರತುಪಡಿಸಿ ಉಳಿದೆಲ್ಲ ಮಾರ್ಗಗಳು ಕಾರ್ಯಾಚರಣೆಗೊಂಡವು.
ಎರಡು ದಿನದ ಹಿಂದೆ ಘಟಕಕ್ಕೆ ಭೇಟಿ ನೀಡಿದ್ದ ವಿಭಾಗೀಯ ನಿಯಂತ್ರಣಾಧಿಕಾರಿ, ವಿಭಾಗ ತಾಂತ್ರಿಕ ಅಧಿಕಾರಿ ಸಿಬ್ಬಂದಿಯ ಮನವೊಲಿಸಿದ್ದರು. ಮುಷ್ಕರ ನಡೆಸುವುದರಿಂದ ಸಾರ್ವಜನಿಕರು, ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತದೆ. ಸರ್ಕಾರ ಎಸ್ಮಾ ಜಾರಿ ಮಾಡಿದರೆ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಸಿಬ್ಬಂದಿಗೆ ಎಚ್ಚರಿಸಿದ್ದರು.
‘ಆ ಹಿನ್ನೆಲೆಯಲ್ಲಿ ಸಿಬ್ಬಂದಿ ಮುಷ್ಕರ ಬೆಂಬಲಿಸದೇ ಕರ್ತವ್ಯಕ್ಕೆ ಹಾಜರಾಗಿದ್ದಾರೆ’ ಎಂದು ಚಾಲಕರೊಬ್ಬರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.