ADVERTISEMENT

ಗಿರಿಜನ ಉಪಯೋಜನೆ: ಸಹಾಯಧನಕ್ಕೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2026, 4:39 IST
Last Updated 28 ಫೆಬ್ರುವರಿ 2026, 4:39 IST
   

ಹೊಸಪೇಟೆ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಕುರಿ ಅಥವಾ ಮೇಕೆ (10+1) ಘಟಕ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಮಾರ್ಚ್ 7ರೊಳಗಾಗಿ ಜಿಲ್ಲಾ ಅನುಷ್ಠಾನಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗಾಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅಥವಾ ಸಮೀಪದ  ಪಶು ವೈದ್ಯ ಸೇವಾ ಸಂಸ್ಥೆಗಳ ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT