ADVERTISEMENT

ವಿಶ್ರಾಂತ ಕುಲಪತಿ ಲಕ್ಕಪ್ಪಗೌಡರಿಗೆ ಶ್ರದ್ಧಾಂಜಲಿ

​ಪ್ರಜಾವಾಣಿ ವಾರ್ತೆ
Published 27 ಜುಲೈ 2021, 8:18 IST
Last Updated 27 ಜುಲೈ 2021, 8:18 IST
ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಪ್ರಾಧ್ಯಾಪಕರು ಹಾಗೂ ಸಿಬ್ಬಂದಿ ಎರಡು ನಿಮಿಷ ಮೌನ ಆಚರಿಸಿದರು
ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಪ್ರಾಧ್ಯಾಪಕರು ಹಾಗೂ ಸಿಬ್ಬಂದಿ ಎರಡು ನಿಮಿಷ ಮೌನ ಆಚರಿಸಿದರು   

ಹೊಸಪೇಟೆ (ವಿಜಯನಗರ): ಸೋಮವಾರ ನಿಧನರಾದ ವಿಶ್ರಾಂತ ಕುಲಪತಿ ಪ್ರೊ. ಎಚ್‌.ಜೆ. ಲಕ್ಕಪ್ಪಗೌಡರ ಅವರಿಗೆ ಮಂಗಳವಾರ ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕುಲಪತಿ ಪ್ರೊ. ಸ.ಚಿ. ರಮೇಶ ಮಾತನಾಡಿ, ‘ಕನ್ನಡ ವಿಶ್ವವಿದ್ಯಾಲಯವನ್ನು ಶೈಕ್ಷಣಿಕ, ಬೌದ್ಧಿಕ ಮತ್ತು ಭೌತಿಕವಾಗಿ ಶ್ರೀಮಂತಗೊಳಿಸಿದ ಮಹಾನ್ ವ್ಯಕ್ತಿ ಲಕ್ಕಪ್ಪಗೌಡರು. ಅವರ ಅಗಲಿಕೆಯಿಂದ ಕನ್ನಡ ವಿಶ್ವವಿದ್ಯಾಲಯದ ಕುಟುಂಬಕ್ಕೆ ತುಂಬಾ ನೋವಾಗಿದೆ’ ಎಂದು ಹೇಳಿದರು.

‘ಕವಿಯಾಗಿ, ವಿಮರ್ಶಕರಾಗಿ, ಪ್ರಾಧ್ಯಾಪಕರಾಗಿ, ಆಡಳಿತಗಾರರಾಗಿ ಅವರು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಜೊತೆಯಲ್ಲಿ ಸ್ನೇಹಜೀವಿಯಾಗಿದ್ದರು. ಸುಮಾರು 70ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದರು. ಅವರ ಅಗಲಿಕೆಯಿಂದ ಕನ್ನಡ ವಿಶ್ವವಿದ್ಯಾಲಯವು ಬಡವಾಗಿದೆ’ ಎಂದರು.

ADVERTISEMENT

ವಿವಿಧ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.