ಕೂಡ್ಲಿಗಿ (ವಿಜಯನಗರ ಜಿಲ್ಲೆ): ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿಗೆ ಬೆಂಕಿ ಹತ್ತಿಕೊಂಡು ಅದು ಸಂಪೂರ್ಣ ಸುಟ್ಟು ಹೋದ ಘಟನೆ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ತಾಲ್ಲೂಕಿನ ಶಿವಪುರ ಬಳಿ ಶನಿವಾರ ನಡೆದಿದೆ.
ಬಾಗಲಕೋಟೆಯಿಂದ ಬೆಂಗಳೂರು ಕಡೆ ಶೇಂಗಾ ಹಿಂಡಿ ತುಂಬಿ ಹೊರಟಿದ್ದ ಲಾರಿ ಶಿವಪುರ ಬಳಿ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ತಡೆ ಗೋಡಗೆ ಡಿಕ್ಕಿ ಹೊಡೆದು ಉರುಳಿ ಬಿತ್ತು. ನಂತರ ಅದಕ್ಕೆ ಬೆಂಕಿ ಹತ್ತಿಕೊಂಡಿತು ಎಂದು ಪೊಲೀಸರು ತಿಳಿಸಿದ್ದಾರೆ.
ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು. ಆದರೆ ಆಗಲೇ ಲಾರಿ ಬಹುತೇಕ ಸುಟ್ಟು ಹೋಗಿತ್ತು. ಈ ಘಟನೆಯಿಂದಾಗಿ ಕೆಲ ಕಾಲ ಹೆದ್ದಾರಿಯಲ್ಲಿ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು.
ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.